Urdu   /   English   /   Nawayathi

ಹ್ಯಾರಿಸ್ ಪುತ್ರ ನಲಪಾಡ್ ಅಂಡ್ ಗ್ಯಾಂಗ್ ಗೆ 14 ದಿನ ಜೈಲು

share with us

ಬೆಂಗಳೂರು: 21 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಉದ್ಯಮಿ ಪುತ್ರ ವಿದ್ವತ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್  ಪುತ್ರ ಮೊಹಮ್ಮದ್ ನಲಪಾಡ್ ಗೆ 8ನೇ ಎಸಿಎಂಎಂ ಕೋರ್ಟ್ ಬುಧವಾರ 14ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಮೊಹಮ್ಮದ್ ನನ್ನು ಪೊಲೀಸರು ಪರಪ್ಪನ ಅಗ್ರಹಾರದತ್ತ ಕೊಂಡೊಯ್ಯುತ್ತಿದ್ದಾರೆ. ನಲಪಾಡ್ ಗ್ಯಾಂಗ್ ನ ಸದಸ್ಯರಿಗೂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಏತನ್ಮಧ್ಯೆ ನಲಪಾಡ್ ಜಾಮೀನು ಅರ್ಜಿ ಸಲ್ಲಿಸಿದ್ದರೆ, ಮತ್ತೊಂದೆಡೆ ವಿದ್ವತ್ ತಂದೆ ಲೋಕನಾಥ್ ಕೂಡಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ನನ್ನ ಮಗ ಸಾವು, ಬದುಕಿನ ಹೋರಾಟ ನಡೆಸುತ್ತಿದ್ದು, ನಲಪಾಡ್ ಮತ್ತು ಗ್ಯಾಂಗ್ ಗೆ ಜಾಮೀನು ನೀಡಬಾರದೆಂದು ಲೋಕನಾಥ್ ಪರ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದ್ದಾರೆ. ವಾದ, ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ನಲಪಾಡ್ ಮತ್ತು ಸಹಚರರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا