Urdu   /   English   /   Nawayathi

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್

share with us

ಮಂಗಳೂರು: 26 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಭಾನುವಾರದಂದು ಬೆಳಿಗ್ಗೆ ಮಾರುತಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ಮುಂಭಾಗದಿಂದ ಬರುತ್ತಿದ್ದ ಖಾಸಗಿ ಸಾರಿಗೆ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸ ಹೆಚ್ಚಾಗಿದ್ದ ಕಾರಣ ಕಾರು ಚಾಲಕ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಸ್ಟೇಟ್ ಬ್ಯಾಂಕ್, ಕಾಟಿಪಳ್ಳ, ಕೈಕಂಬ ಹಾದಿಯಲ್ಲಿ ಸಂಚರಿಸುವ ಖಾಸಗಿ ಬಸ್ಸಿನ ಮುಂಭಾಗದ ಗಾಜು ಪುಡಿಯಾಗಿದ್ದು, ಕಾರು ಸಹ ಜಖಂ ಗೊಂಡಿದೆ. ಸೂರತ್ಕಲ್ ಸಂಚಾರಿ ಪೋಲೀಸರು ಸ್ಥಳಕ್ಕೆ ಹೋಗಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا