Urdu   /   English   /   Nawayathi

ಕಾವೇರಿ ತಮಿಳುನಾಡು ಬಂದ್ ಹಲವೆಡೆ ಬಸ್‌ಗಳಿಗೆ ತೂರಾಟ

share with us

ಚೆನ್ನೈ: 05 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕಾವೇರಿ ನಿರ್ವಹಣಾ ಮಂಡಲಿ ರಚನೆ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರಸರ್ಕಾರದ ಧೋರಣೆ ಖಂಡಿಸಿ ತಮಿಳುನಾಡಿನಲ್ಲಿ ಬಂದ್‌ಗೆ ಕರೆ ನೀಡಿದ್ದ ವೇಳೆ ಪ್ರತಿಭಟನಾಕಾರರು ರಾಜ್ಯಸಾರಿಗೆ ಸಂಸ್ಥೆಗಳ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಟಾಲಿನ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ತಿರುವಣ್ಣಾಮಲೈ, ಕೃಷ್ಣಗಿರಿ, ದಿಂಡ್‌ಗಲ್ ಸೇರಿದಂತೆ ಹಲವೆಡೆ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿದ್ದರಿಂದ 25ಕ್ಕೂ ಹೆಚ್ಚು ಬಸ್‌ಗಳು ಜಖಂಗೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡಿನಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.

ಡಿಎಂಕೆ ನೇತೃತ್ವದಲ್ಲಿ ಕರೆ ನೀಡಲಾಗಿರುವ ಬಂದ್‌ಗೆ ಪಿಎಂಕೆ, ಕಮ್ಯುನಿಸ್ಟ್ ಪಕ್ಷ, ಎಂಡಿಎಂಕೆ, ಇಂಡಿಯನ್ ಯೂನಿಯನ್ ಮುಸ್ಲೀಂ ಲೀಗ್ ಸೇರಿದಂತೆ ಹಲವು ಪಕ್ಷಗಳು ಬೆಂಬಲ ಸೂಚಿಸಿವೆ.

ಬಂದ್‌ನಿಂದಾಗಿ ಅಂಗಡಿ-ಮುಂಗಟ್ಟುಗಳು ಮುಚ್ಚಿವೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರ ಸಾರಿಗೆ ಬಸ್‌ಗಳು ಸ್ಥಗಿತಗೊಂಡಿದ್ದರಿಂದ ನಾಗರಿಕರು ಪರದಾಡುವಂತಾಗಿದೆ.

ಈರೋಡ್‌ನಲ್ಲಿ 5 ಸಾವಿರ ಜವಳಿ ಅಂಗಡಿಗಳು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿವೆ.

ಮತ್ತೊಂದೆಡೆ ಪುದುಚೆರಿಯಲ್ಲೂ ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಜನಜೀವನ ಏರುಪೇರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸಂ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا