Urdu   /   English   /   Nawayathi

ಬಿಜೆಪಿಯ ಎನ್.ಆರ್ ರಮೇಶ್’ಗೆ ಟಿಕೆಟ್ ಸಿಗದಕ್ಕೆ ಅಭಿಮಾನಿಯಿಂದ ಆತ್ಮಹತ್ಯೆಗೆ ಯತ್ನ..!

share with us

ಬೆಂಗಳೂರು: 09 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಟಿಕೆಟ್ ವಂಚಿತ ಬಿಜೆಪಿ ಅಭ್ಯರ್ಥಿ ಬೆಂಬಲಿಗರ ಆಕ್ರೋಶದ ಕಟ್ಟೆ ಒಡೆದಿದೆ. ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಅವರ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.  ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಟೆಕೆಟ್ ಆಕಾಂಕ್ಷಿಯಾಗಿದ್ದ ಎನ್.ಆರ್.ರಮೇಶ್ ಅವರಿಗೆ ಕೊನೆ ಗಳಿಗೆಯಲ್ಲಿ ಟಿಕೆಟ್ ಕೈತಪ್ಪಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಉದಯ ಗರುಡಾಚಾರ್ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ರಮೇಶ್ ಬೆಂಬಲಿಗರು ಚಿಕ್ಕಪೇಟೆ ಮತ್ತು ಯಡಿಯೂರು ವಾರ್ಡ್‍ನಲ್ಲಿ ಅಂಗಡಿ-ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.  ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಎನ್.ಆರ್.ರಮೇಶ್ ಅವರ ಅಭಿಮಾನಿಯಾದ ರಾಜೇಂದ್ರ ನಾಯ್ಡು ಎಂಬಾತ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ.

ಟಿಕೆಟ್ ವಂಚಿತರಾಗಿರುವ ಎನ್.ಆರ್.ರಮೇಶ್ ಅವರು ಪಕ್ಷದ ತೀರ್ಮಾನದಿಂದ ಆಘಾತಕ್ಕೊಳಗಾಗಿದ್ದು, ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ತನ್ನ ಬೆಂಬಲಿಗರ ಸಭೆ ನಂತರ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.  ರಾಜರಾಜೇಶ್ವರಿನಗರದಿಂದ ಟಿಕೆಟ್ ವಂಚಿತರಾದ ಬಿಬಿಎಂಪಿ ಮಾಜಿ ಸದಸ್ಯ ರಾಮಚಂದ್ರಪ್ಪ ಅವರು ಮಾಜಿ ಡಿಸಿಎಂ ಆರ್.ಅಶೋಕ್ ವಿರುದ್ಧ ಸಿಡಿಮಿಡಿಗೊಂಡಿದ್ದು, ಇನ್ನುಮುಂದೆ ರಾಜಕೀಯ ಬೇಡಿಕೆ ಇಟ್ಟುಕೊಂಡು ಅಶೋಕ್ ಅವರ ಮನೆ ಬಾಗಿಲಿಗೆ ಹೋಗುವುದಿಲ್ಲ ಎಂದು ಶಪಥ ಮಾಡಿದ್ದಾರೆ.  ಈ ಹಿಂದೆ ಹಲವು ಬಾರಿ ರಾಮಚಂದ್ರಪ್ಪ ಅವರು ಆರ್‍ಆರ್ ನಗರದಿಂದ ಟಿಕೆಟ್ ಕೇಳಿದ್ದರು. ಕಳೆದ ಬಾರಿ ಎಂ.ಶ್ರೀನಿವಾಸ್ ಅವರಿಗೆ ಬಿಜೆಪಿ ಟಿಕೆಟ್ ನೀಡಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಮಚಂದ್ರಪ್ಪ ಅವರಿಗೆ ಟಿಕೆಟ್ ನೀಡುವುದಾಗಿ ಅಶೋಕ್ ಭರವಸೆ ನೀಡಿದ್ದರು.

ಆದರೆ, ಮಾತು ತಪ್ಪಿರುವ ಅಶೋಕ್ ಅವರು ಈ ಬಾರಿಯೂ ಟಿಕೆಟ್ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇನ್ನು ಮುಂದೆ ಅಶೋಕ್ ಮನೆ ಬಾಗಿಲಿಗೆ ಹೋಗುವುದಿಲ್ಲ. ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ಇಂದು ಸಂಜೆ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಈ ಸಂಜೆಗೆ ತಿಳಿಸಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಸದಸ್ಯ ಕೆ.ಉಮೇಶ್‍ಶೆಟ್ಟಿ ಅವರು ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದರು. ಕೊನೆ ಗಳಿಗೆಯಲ್ಲಿ ತಮ್ಮ ರಾಜಕೀಯ ಗುರು ವಿ.ಸೋಮಣ್ಣ ಅವರಿಗೆ ಕ್ಷೇತ್ರ ಬಿಟ್ಟುಕೊಡುವ ಪರಿಸ್ಥಿತಿ ಬಂದೊದಗಿದ ಹಿನ್ನೆಲೆಯಲ್ಲಿ ಶೆಟ್ಟಿ ಅವರು ಫೋನ್ ಸ್ವಿಚ್‍ಆಫ್ ಮಾಡಿಕೊಂಡು ಯಾರ ಕಣ್ಣಿಗೂ ಬೀಳದಂತೆ ನಾಪತ್ತೆಯಾಗಿದ್ದಾರೆ.  ಅತೃಪ್ತರನ್ನು ಸಮಾಧಾನಪಡಿಸಲು ಪಕ್ಷದ ವರಿಷ್ಠರು ಯತ್ನಿಸುತ್ತಿರುವರಾದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಒಟ್ಟಾರೆ 72 ಮಂದಿಯ ಮೊದಲ ಪಟ್ಟಿಯ ಬಂಡಾಯದ ಬಿಸಿಗೆ ಬಿಜೆಪಿ ತತ್ತರಿಸಿಹೋಗಿದ್ದು, ಉಳಿದ ಅಭ್ಯರ್ಥಿಗಳ ಪಟ್ಟಿ ಬಹಿರಂಗಗೊಂಡ ನಂತರ ಬಂಡಾಯ ಯಾವ ಮಟ್ಟ ತಲುಪುವುದೋ ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا