Urdu   /   English   /   Nawayathi

ಯುಎಇನಲ್ಲಿ ಆಸ್ಪತ್ರೆ ಕಟ್ಟಡದಿಂದ ಹಾರಿ ಭಾರತೀಯ ನರ್ಸ್ ಆತ್ಮಹತ್ಯೆ

share with us

ದುಬೈ: 11 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಆಸ್ಪತ್ರೆ ಕಟ್ಟಡವೊಂದರ ಮೇಲ್ಛಾವಣಿಯಿಂದ ಹಾರಿ ಭಾರತೀಯ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಯುಕ್ತ ಅರಬ್ ಗಣರಾಜ್ಯದ(ಯುಎಇ) ಅಲ್ ಐನ್ ನಗರದಲ್ಲಿ ಸಂಭವಿಸಿದೆ. ಸುಜಾ ಸಿಂಗ್(40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪತಿಯಿಂದ ವಿಚ್ಛೇದನ ಪಡೆದಿದ್ದು, ಇವರ ಇಬ್ಬರು ಮಕ್ಕಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸುಜಾ ಸಿಂಗ್ ಜನವರಿಯಿಂದ ಆಸ್ಪತ್ರೆಯ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಅವರು ಆಸ್ಪತ್ರೆಯ ಕಟ್ಟಡ ಮೇಲ್ಛಾವಣಿಯಿಂದ ಕೆಳಗೆ ಹಾರಿ ಸಾವಿಗೆ ಶರಣಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ ಗಲ್ಫ್ ನ್ಯೂಸ್ ವರದಿ ಮಾಡಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا