Urdu   /   English   /   Nawayathi

ದಲಿತರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚಳ: ಮನಮೋಹನ್‌ ಸಿಂಗ್ ಆತಂಕ

share with us

ಚಂಡೀಗಡ: 11 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ದೇಶದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸದಿದ್ದರೆ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಆತಂಕ ವ್ಯಕ್ತಪಡಿಸಿದರು. ಪಂಜಾಬ್‌ ವಿಶ್ವವಿದ್ಯಾಲಯದಲ್ಲಿ ಎಸ್.ಬಿ. ರಂಗನೇಕರ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೌರ್ಜನ್ಯ ಪ್ರಕರಣಗಳನ್ನು ಲಘುವಾಗಿ ಪರಿಗಣಿಸಿದರೆ ದ್ವೇಷದ ರಾಜಕೀಯಕ್ಕೆ ಆಹ್ವಾನ ನೀಡಿದಂತೆ’ ಎಂದರು.

‘ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿ ಆಧಾರದಲ್ಲಿ ಭಾರತೀಯರನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ. ಈ ರೀತಿಯ ರಾಜಕೀಯವನ್ನು ನಾವು ಬಲವಾಗಿ ತಿರಸ್ಕರಿಸಬೇಕು’ ಎಂದು ಅವರು ಕರೆ ನೀಡಿದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا