Urdu   /   English   /   Nawayathi

ಉತ್ತರಪ್ರದೇಶದಲ್ಲಿ ಮತ್ತೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್‍ರೇಪ್

share with us

ಮೀರತ್: 16 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕತುವಾ, ಉನ್ನಾವೊ ಮತ್ತು ಸೂರತ್ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಾಗಲೇ. ಉತ್ತರ ಪ್ರದೇಶದಲ್ಲೂ ಇಬ್ಬರು ಬಾಲಕಿಯರೂ ಸೇರಿದಂತೆ ಮೂವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೈರಾನಾ ಕೊತ್ವಾಲಿ ಜಿಲ್ಲೆಯ ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿ ಮನೆಗೆ ಹಿಂದಿರುಗುತ್ತಿದ್ದ 14 ವರ್ಷದ ಬಾಲಕಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಇದೇ ಪ್ರದೇಶದ ಭರಾಲಾ ಗ್ರಾಮದಲ್ಲಿ ಮೂವರು ಕಾಮುಕರು ಮನೆ ಬಳಿ ಜಾನುವಾರುಗಳಿಗೆ ಹುಲ್ಲು ಹಾಕುತ್ತಿದ್ದ 23 ವರ್ಷದ ಮಹಿಳೆಯೊಬ್ಬರ ಮೇಲೆ ಗ್ಯಾಂಗ್‍ರೇಪ್ ಮಾಡಿ ಪರಾರಿಯಾಗಿದ್ದಾರೆ.  ಕುಂದ್ಲಾ ಪೊಲೀಸ್ ಠಾಣೆಯ ಮಾಲಕಪುರ ಗ್ರಾಮದಲ್ಲಿ ಬಾಲಕಿಯೊಬ್ಬಳ ಮೇಲೂ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಆಕೆಯ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا