Urdu   /   English   /   Nawayathi

ಕತುವಾ ಅತ್ಯಾಚಾರ: ಮಂಪರು ಪರೀಕ್ಷೆಗೆ ಆರೋಪಿಗಳ ಸಿದ್ಧ

share with us

ಜಮ್ಮು: 16 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕತುವಾದಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನಾವು ತಪ್ಪಿತಸ್ಥರಲ್ಲ, ಬೇಕಿದ್ದರೆ ನಮ್ಮನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಎಲ್ಲ ಎಂಟು ಆರೋಪಿಗಳು ಅಲವತ್ತುಕೊಂಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಕತುವಾ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಆರೋಪಿಗಳ ವಿರುದ್ಧ ಸಲ್ಲಿಸಲಾಗಿರುವ ಆರೋಪ ಪಟ್ಟಿಗಳ ಪ್ರತಿಯನ್ನು ನೀಡುವಂತೆ ರಾಜ್ಯ ಅಪರಾಧ ವಿಭಾಗಕ್ಕೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏ. 28ಕ್ಕೆ ಮುಂದೂಡಿದರು. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದ ಈ ಬಾಲಕಿಯನ್ನು ಕತುವಾ ಜಿಲ್ಲೆಯ ಗ್ರಾಮದ ದೇವಾಲಯವೊಂದರಲ್ಲಿ ಬಂಧನದಲ್ಲಿರಿಸಲಾಗಿತ್ತು. ಈ ವೇಳೆ ಬಾಲಕಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಲಾಗಿತ್ತು. ಆರೋಪಿಗಳು ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ತನಿಖಾ ತಂಡ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ತಿಳಿಸಿತ್ತು.

ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಪರಾಧಿಯನ್ನು ತನಿಖಾ ತಂಡ ಬಂಧಿಸಿದೆ. ಜಾಮಿನು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನದ ನಂತರ ನಡೆಯಲಿದೆ.

ಈ ನಡುವೆ ಕತುವಾದಲ್ಲಿ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಕುರಿತು ಸಲ್ಲಿಸಲಾಗಿರುವ 2 ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ಕೈಎತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.

ಕತುವಾ ಜಿಲ್ಲೆಯ ವಕೀಲರಾದ ದೀಪಿಕಾ ಸಿಂಗ್ ರಾಜಾವತ್ ಬಾಲಕಿಯ ಕುಟುಂಬದ ಪರವಾಗಿ ಅರ್ಜಿ ಸಲ್ಲಿಸಿದ್ದಾರೆ. ದೆಹಲಿ ಮೂಲದ ವಕೀಲರಾದ ಅನುಜಾ ಕಪೂರ್ ಈ ಪ್ರಕರಣವನ್ನು ಕತುವಾ ಜಿಲ್ಲೆಯಿಂದ ದೆಹಲಿಯ ಸ್ಥಳೀಯ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಈ ಎರಡು ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿರುವುದಾಗಿ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ ಅವರಿಂದ ಈಗ ತಿಳಿಸಿದೆ.

ಸಂ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا