Urdu   /   English   /   Nawayathi

ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ಹ್ಯಾಕ್‌

share with us

ನವದೆಹಲಿ: 19 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ಅನ್ನು ಗುರುವಾರ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಸಿಬಿಐ ನ್ಯಾಯಾಧೀಶ ಬಿ.ಎಚ್‌.ಲೋಯ ಸಾವು ಸಹಜ ಕಾರಣದಿಂದ ಸಂಭವಿಸಿದೆ ಎಂದು ಸುಪ್ರೀಂ ಕೋರ್ಟ್‌, ಸಾವಿನ ಕುರಿತು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸಲ್ಲಿಸಲಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ, ಬೆನ್ನಲೇ ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ಅನ್ನು ಹ್ಯಾಕ್ ಮಾಡಲಾಗಿದೆ. ಗುರುವಾರ ಮಧ್ಯಾಹ್ನ 12.10ರ ಸುಮಾರಿಗೆ ಹ್ಯಾಕ್‌ ಮಾಡಲಾಗಿದೆ. ಹ್ಯಾಕ್‌ ಮಾಡಿರುವ ಸ್ಕ್ರೀನ್‌ ಶಾಟ್‌ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಬ್ರೆಜಿಲ್‌ ದೇಶದಲ್ಲಿ ಹ್ಯಾಕ್‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹ್ಯಾಕ್ ಮಾಡಿದವರು ವೆಬ್‌ಸೈಟ್‌ನಲ್ಲಿ ಬ್ರೆಜಿಲ್‌ ದೇಶದ ಮರಿಜಿನಾ ಹೂವಿನ ಚಿತ್ರವನ್ನು ಪ್ರಕಟಿಸಿದ್ದಾರೆ ಹಾಗೂ ’ ಹೈಟೆಕ್‌ ಬ್ರೆಜಿಲ್‌ ಹ್ಯಾಕ್ ಟೀಂ’ ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ರಕ್ಷಣಾ ಇಲಾಖೆ ಸೇರಿದಂತೆ  ಇತರೆ ಸರ್ಕಾರಿ ಇಲಾಖೆಗಳ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಲಾಗಿತ್ತು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا