Urdu   /   English   /   Nawayathi

ಬೆಳಗಾವಿ ಕೋರ್ಟ್ ಆವರಣದಲ್ಲೇ ವ್ಯಕ್ತಿಗೆ ಚೂರಿ ಇರಿದು ಕೊಲೆಗೆ ಯತ್ನ!

share with us

ಬೆಳಗಾವಿ: 19 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕೌಟುಂಬಿಕ ಕಲಹ ಸಂಬಂಧ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಇಂದು ಕೋರ್ಟ್ ಆವರಣದಲ್ಲಿ ನಡೆದಿದೆ. ಶಿರಸಿ ಮೂಲದ ನಿಖಿಲ್ ಸುರೇಶ ಧಾವಳೆ (32) ಗಾಯಗೊಂಡಿರುವ ವ್ಯಕ್ತಿ. ಬಲಬದಿ ಬೆನ್ನಿಗೆ ಚೂರಿಯಿಂದ ಇರಿಯಲಾಗಿತ್ತು. ಸ್ಥಳೀಯರು ಹಾಗೂ ಪೊಲೀಸರು ಗಾಯಾಳು ನಿಖಿಲ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಿಖಿಲ್ ಆರೋಗ್ಯದಲ್ಲಿ‌ ಚೇತರಿಕೆ ಕಂಡಿದ್ದು, ಯಾವುದೇ ಅಪಾಯ ಇಲ್ಲ ಎಂದು‌ ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಕಾರಣ? 
ಕೌಟುಂಬಿಕ ಕಲಹದಿಂದ ನಿಖಿಲ್ ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ಬೆಳಗಾವಿ ಜಿಲ್ಲಾ ಕೌಟುಂಬಿಕ‌ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಗುರುವಾರ ವಿಚಾರಣೆಗಾಗಿ ಕೋರ್ಟ್‌ಗೆ ಆಗಮಿಸಿದಾಗ ನಿಖಿಲ್ ಪತ್ನಿಯ ಸಹೋದರ ಚೂರಿ ಇರಿದು ಪರಾರಿಯಾಗಿದ್ದಾನೆ. 

ಈ ಘಟನೆ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا