Urdu   /   English   /   Nawayathi

ಅನುಕೂಲಕರವಾಗುವ ಲೆಕ್ಕಾಚಾರ. ಬಾದಾಮಿಯಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

share with us

ಮೈಸೂರು: 23 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ನನ್ನ ಸ್ಪರ್ಧೆಯಿಂದ ಬಾಗಲಕೋಟೆ ವಿಜಯಪುರ ಭಾಗದಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಸ್ಥಳೀಯ ನಾಯಕರ ಲೆಕ್ಕಾಚಾರದ ಮೇಲೆ ಬಾದಾಮಿಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚಾಮುಂಡೇಶ್ವರಿಯಲ್ಲಿ ಸೋಲುವ ಭಯದಿಂದ ಬಾದಾಮಿಗೆ ಹೋಗುತ್ತಿದ್ದಾರೆ ಎಂಬ ಬಿಜೆಪಿ ಮತ್ತು ಜೆಡಿಎಸ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಸೋಲಿನ‌ ಭಯದಿಂದ ಕುಮಾರಸ್ವಾಮಿ‌ ಎರಡು‌ ಕಡೆ ನಿಲ್ಲುತ್ತಿದ್ದಾರಾ? ಮೋದಿ‌ ಸೋಲಿನ ಭಯದಿಂದ ಎರಡು ಕಡೆ ಸ್ಪರ್ಧೆ ಮಾಡಿದ್ದಾರಾ?, ಜೆಡಿಎಸ್​ನವರಂತೆ ಕೀಳು ಮಟ್ಟದ ಟೀಕೆ ಮಾಡುವುದಿಲ್ಲ. ಬಾದಾಮಿಯಲ್ಲಿ ಯಾರೇ ಸ್ಪರ್ಧಿಸಿಲಿ ನನಗೆ ಯಾವ ಭಯವಿಲ್ಲ ಎಂದರು.

ಆರಂಭದಲ್ಲಿ ಬಾದಾಮಿ ಕ್ಷೇತ್ರದಲ್ಲಿ ಡಾ. ದೇವರಾಜ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಭಾನುವಾರ ಬಿಡುಗಡೆಯಾದ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಸಿದ್ದರಾಮಯ್ಯನವರಿಗೆ ಬಾದಾಮಿ ಟಿಕೆಟ್ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಜತೆಗೆ ಬಾದಾಮಿಯಲ್ಲೂ ಸ್ಪರ್ಧೆ ಮಾಡುವುದು ಖಚಿತವಾಗುತ್ತಿದ್ದಂತೆ ಎರಡೂ ಕ್ಷೇತ್ರಗಳಲ್ಲಿ ಅವರನ್ನು ಕಟ್ಟಿಹಾಕುವ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ತಂತ್ರ ಇನ್ನಷ್ಟು ಚುರುಕು ಪಡೆದುಕೊಂಡಿದೆ.

ಒಂದೆಡೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಿರಿಯ ಮುಖಂಡ ಎಲ್‌. ರೇವಣ ಸಿದ್ದಯ್ಯ ಕಾಂಗ್ರೆಸ್‌ನಿಂದ ಹೊರ ಬಂದು ಸಿದ್ದರಾಮ ಯ್ಯಗೆ ಸೆಡ್ಡು ಹೊಡೆದರೆ, ಇನ್ನೊಂದೆಡೆ ಬಾದಾಮಿಯಲ್ಲಿ ಬಿಜೆಪಿಯಿಂದ ಸಂಸದ ಶ್ರೀರಾಮುಲು ಅಥವಾ ಬಾಗಲಕೋಟೆ ಸಂಸದ ಗದ್ದಿಗೌಡರ್‌ ಕಣಕ್ಕಿಳಿಯುವ ಸಾಧ್ಯತೆಯಿದೆ.

ಕ, ಕ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا