Urdu   /   English   /   Nawayathi

ರಣತಂತ್ರ; ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಕಣಕ್ಕೆ

share with us

ಬಾಗಲಕೋಟೆ: 24 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣಿಯುವ ತಂತ್ರಗಾರಿಕೆ ರೂಪಿಸಿರುವ ಬಿಜೆಪಿ ಶ್ರೀರಾಮುಲುವನ್ನು ಬಾದಾಮಿ ಕ್ಷೇತ್ರದಲ್ಲಿ ಅಖಾಡಕ್ಕಿಳಿಸಿದೆ. ಮಂಗಳವಾರ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಶ್ರೀರಾಮುಲು ಚುನಾವಣಾಧಿಕಾರಿಗಳಿಗೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಗ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ, ರಾಜ್ಯ ಚುನಾವಣಾ ಉಸ್ತುವಾರಿಗಳಾದ ಪ್ರಕಾಶ್ ಜಾವ್ಡೇಕರ್, ಮುರಳೀಧರ್ ರಾವ್ ಶ್ರೀರಾಮುಲುಗೆ ಸಾಥ್ ನೀಡಿದ್ದರು.

ಈಗಾಗಲೇ ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀರಾಮುಲುವನ್ನು, ಬಾದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಖಾಡಕ್ಕಿಳಿಸಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತನ್ನ ಗೆಲುವು ಶತಃಸಿದ್ಧ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಕೊನೆಯಲ್ಲಿ ಉತ್ತರಕರ್ನಾಟಕ ಭಾಗದ ಜನರ ಒತ್ತಡದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಾಗಿ ಹೇಳಿ ನಾಮಪತ್ರ ಸಲ್ಲಿಸಿದ್ದರು.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا