Urdu   /   English   /   Nawayathi

ಜೆಡಿಎಸ್–ಬಿಜೆಪಿ ಮಧ್ಯೆ ಮ್ಯಾಚ್ ಫಿಕ್ಸಿಂಗ್, ಜೆಡಿಎಸ್‌ಗೆ ಮತ ಹಾಕಿದರೆ ಬಿಜೆಪಿಗೇ ಹಾಕಿದಂತೆ: ಸಿದ್ದರಾಮಯ್ಯ ಆರೋಪ

share with us

ಕುಮಟಾ: 26 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ. ಜೆಡಿಎಸ್‌ಗೆ ಮತ ಹಾಕಿದರೆ ಬಿಜೆಪಿಗೇ ಹಾಕಿದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಪಟ್ಟಣದಲ್ಲಿ ಗುರುವಾರ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ಈ ಬಾರಿ 20-25 ಸೀಟು ಗೆದ್ದರೆ ಅದೇ ಹೆಚ್ಚು. ಯಡಿಯೂರಪ್ಪ, ಅಮಿತ್ ಶಾ ಅವರು ಕುಮಾರಸ್ವಾಮಿ ಜತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ. ಎರಡೂ ಪಕ್ಷದವರು ಸೇರಿ ಕಾಂಗ್ರೆಸ್‌ಅನ್ನು ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಕೆಡವಲು ಯತ್ನಿಸುತ್ತಿದಾರೆ. ಅವರ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ ಎಂದು ದೂರಿದರು.

ಇದೇ ವೇಳೆ ಯಾತ್ರೆಯ ಬಸ್ ನಲ್ಲಿದ್ದ ಸಚಿವ ಡಿ.ಕೆ.ಶಿವಕುಮಾರ್ 'ಈ ಸಲ ಕಪ್ ನಮ್ದೇ' ಎಂದು ಘೋಷಿಸಿದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا