Urdu   /   English   /   Nawayathi

ನ್ಯಾಯಾಂಗದಲ್ಲಿ ಸರ್ಕಾರದ ಹಸ್ತಕ್ಷೇಪ: ಸುಪ್ರೀಂ ಕೋರ್ಟ್‌ ವಕೀಲರ ಸಂಘ ಆರೋಪ

share with us

ನವದೆಹಲಿ: 26 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ನ್ಯಾಯಾಂಗದಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್‌ ವಕೀಲರ ಸಂಘ ಆರೋಪಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಹಿರಿಯ ವಕೀಲೆ ಇಂದು ಮಲ್ಹೊತ್ರಾ ಅವರ ನೇಮಕಕ್ಕೆ ಅನುಮೋದನೆ ನೀಡಿ, ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರ ನೇಮಕ ತಡೆಹಿಡಿದಿರುವುದಕ್ಕೆ ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

ಇಂದು ಮಲ್ಹೊತ್ರಾ ಉತ್ತಮ ವಕೀಲೆ ಮತ್ತು ಸಮರ್ಥ ನ್ಯಾಯಮೂರ್ತಿ ಎಂಬುದನ್ನು ಸಾಬೀತುಪಡಿಸಬಲ್ಲರು. ಆದರೆ ಕೆ.ಎಂ.ಜೋಸೆಫ್ ಅವರ ನೇಮಕಾತಿ ಶಿಫಾರಸಿಗೆ ಸರ್ಕಾರ ಅನುಮೋದನೆ ನೀಡದಿರಲು ಸಾಧ್ಯವೇ ಇಲ್ಲ. ಒಬ್ಬರ ನೇಮಕಕ್ಕೆ ಅನುಮೋದನೆ ನೀಡಿ ಮತ್ತೊಬ್ಬರ ನೇಮಕಕ್ಕೆ ಸಮ್ಮತಿ ಸೂಚಿಸುವ ಮೂಲಕ ನ್ಯಾಯಾಂಗದ ಕೆಲಸದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿದೆ. ಇದು ಗಂಭೀರ ವಿಚಾರ ಎಂಬುದಾಗಿ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಅಧ್ಯಕ್ಷ, ವಕೀಲ ವಿಕಾಸ್ ಸಿಂಗ್ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಕೊಲಿಜಿಯಂ, ಮಲ್ಹೊತ್ರಾ ಮತ್ತು ಜೋಸೆಫ್ ಅವರ ಹೆಸರನ್ನು ಜನವರಿಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದನ್ನು ಪರಿಶೀಲಿಸಿದ ಕಾನೂನು ಸಚಿವಾಲಯ ಮಲ್ಹೊತ್ರಾ ಅವರ ನೇಮಕಕ್ಕೆ ಮಾತ್ರ ಅನುಮತಿ ನೀಡಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا