Urdu   /   English   /   Nawayathi

‘ಭಯೋತ್ಪಾದನೆ ಜಾಗತಿಕ ಪಿಡುಗು’

share with us

ಬೆಂಗಳೂರು: 28 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ‘ಭಯೋತ್ಪಾದನೆ ಕೇವಲ ಒಂದು ದೇಶದ ಸಮಸ್ಯೆಯಲ್ಲ. ಅದು ಇಡೀ ಜಗತ್ತಿಗೆ ಅಂಟಿರುವ ಪಿಡುಗು. ಮುಂದಿನ 30-40 ವರ್ಷದಲ್ಲಿ ಇದು ಇನ್ನೂ ಹೆಚ್ಚಾಗಲಿದೆ’ ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಕಳವಳ ವ್ಯಕ್ತಪಡಿಸಿದರು. ಯಲಹಂಕದ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸುಸ್ಥಿರ ದೇಶ ನಿರ್ಮಾಣದ ಬಗ್ಗೆ ಕಾಳಜಿ ವಹಿಸುವ ಅಗತ್ಯವಿದೆ. ವಿಜ್ಞಾನ, ತಂತ್ರಜ್ಞಾನ, ಮಾಹಿತಿ ಜಾಗತೀಕರಣವಾಗಿದೆ. ಹೊಸ ಆಲೋಚನೆಗಳು, ಸರಳತೆ, ಶಾಂತಿಯುತ ಸಮಾಜ ನಿರ್ಮಿಸಲು ಆಲೋಚಿಸಬೇಕಿದೆ ಎಂದರು.

ದೇಶದ ಬೆಳವಣಿಗೆ ಬಗ್ಗೆ ಯುವಕರು ಕನಸು ಕಾಣುವುದರ ಜೊತೆಗೆ ಸಂಶೋಧನಾ ಗುಣಗಳನ್ನು ಬೆಳೆಸಿಕೊಳ್ಳದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ. ದೂರ ದೃಷ್ಟಿಯುಳ್ಳ ಸಮಾಜ ನಿರ್ಮಾಣವಾಗಬೇಕಿದೆ ಎಂದು ಸಲಹೆ ನೀಡಿದರು.

ದೇಶದಲ್ಲಿ ಪ್ರತಿ 30 ನಿಮಿಷಕ್ಕೆ ಒಂದು ಮಗು ಸಾಯುತ್ತಿದೆ. ಪ್ರತಿ ಗಂಟೆಗೆ 4 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಪ್ರಕರಣಗಳು ದಾಖಲಾಗುತ್ತಿದೆ.

ವಿಶ್ವವಿದ್ಯಾಲಯವೊಂದರಲ್ಲಿ ಶೇಕಡ 67ರಷ್ಟು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಪ್ರಕರಣವೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಆದರೆ, ಯಾರೊಬ್ಬರೂ ದೂರುನೀಡಿಲ್ಲ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಎಚ್ಚರಿಸಿದರು.

ಜಗತ್ತಿನಾದ್ಯಂತ ಅಂದಾಜು 15.2 ಕೋಟಿ ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಅವರನ್ನು ರಕ್ಷಿಸುವ ಕೆಲಸ ಮಾಡಬೇಕಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ದೊರೆತರೆ ಇದನ್ನು ತಡೆಯಬಹುದು ಎಂದು ತಿಳಿಸಿದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا