Urdu   /   English   /   Nawayathi

ಯುಪಿ, ರಾಜಸ್ಥಾನದಲ್ಲಿ ಭಾರೀ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವು

share with us

ಲಖನೌ/ಜೈಪುರ್: 03 ಮೇ (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ನಿನ್ನೆ ಇಡೀ ರಾತ್ರಿ ಭಾರೀ ಬಿರುಗಾಳಿ ಮತ್ತು ಧಾರಾಕಾರ ಮಳೆಯಿಂದಾಗಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟು ಹಲವರು ತೀವ್ರ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಆಗ್ರಾ, ಬಿಜ್ನೋರ್, ಬರೇಲಿ, ಶಹರ್‍ಪುರ್, ಪಿಲ್‍ಬಿಟ್, ಫಿರೋಜಾಬಾದ್, ಚಿತ್ರಕೂಟ್, ಮುಜಾಫರ್‍ನಗರ, ರಾಯ್‍ಭರೇಲಿ ಮತ್ತು ಉನ್ನಾವೋ ಜಿಲ್ಲೆಗಳಲ್ಲಿ ಧೂಳಿನಿಂದ ಕೂಡಿದ ಗಾಳಿ ಮತ್ತು ಬಿರುಮಳೆಯಿಂದಾಗಿ 55ಕ್ಕೂ ಹೆಚ್ಚು ಮಂದಿ ಮೃತಪಟ್ಟು ಅನೇಕರು ತೀವ್ರ ಗಾಯಗೊಂಡಿದ್ದಾರೆ. ಬಿರುಗಾಳಿ ಮತ್ತು ಮಳೆಯ ರೌದ್ರಾವತಾರಕ್ಕೆ ಅನೇಕ ಮನೆಗಳು ಕುಸಿದುಬಿದ್ದಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿವೆ.

ರಕ್ಷಣೆ ಮತ್ತು ತ್ವರಿತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜಸ್ಥಾನದಲ್ಲಿ 30ಕ್ಕೂ ಹೆಚ್ಚು ಬಲಿ: ಮರುಭೂಮಿ ರಾಜ್ಯ ರಾಜಸ್ತಾನದಲ್ಲಿ ನಿನ್ನೆ ಇಡೀ ರಾತ್ರಿ ಭಾರೀ ಬಿರುಗಾಳಿ ಮತ್ತು ಧಾರಾಕಾರ ಮಳೆಯಿಂದಾಗಿ 30ಕ್ಕೂ ಹೆಚ್ಚು ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಮತಿಸ್ಯ ಪ್ರಾಂತ್ಯದಲ್ಲಿ ಭಾರೀ ರಭಸದ ಮರಳು ಬಿರುಗಾಳಿ ಮತ್ತು ಅದರ ಹಿಂದೆಯೇ ಸುರಿದ ಬಿರುಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು, ಹಲವು ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ಧಾರೆ.

ಇಂದು ನಸುಕಿನ 3 ಗಂಟೆವರೆಗೆ ದುರಂತದಲ್ಲಿ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಭರತ್‍ಪುರ್, ಧೋಲ್‍ಪುರ್, ಅಲ್ವಾರ್ ಮತ್ತು ಜುಜ್ನು ಪ್ರದೇಶಗಳಲ್ಲಿ ಸಾವು-ನೋವು ಸಂಭವಿಸಿದೆ. ಕೆಲವರು ನಾಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ವಿಕೋಪ ನಿರ್ವಹಣೆ ಮತ್ತು ಪರಿಹಾರ ಇಲಾಖೆ ಕಾರ್ಯದರ್ಶಿ ಹೇಮಂತ್ ಕುಮಾರ್ ತಿಳಿಸಿದ್ದಾರೆ. ವಿಕೋಪ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ತಂಡಗಳು ಸಮರೋಪಾದಿಯ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಪ್ರಕೃತಿ ವಿಕೋಪದಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಅಗತ್ಯವಾದ ಎಲ್ಲ ನೆರವು ನೀಡುವುದಾಗಿ ಟ್ವಿಟರ್‍ನಲ್ಲಿ ಪ್ರಕಟಿಸಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಲ್ಹೋಟ್ ತಮ್ಮ ಜನ್ಮದಿನದ ಸಮಾರಂಭವನ್ನು ರದ್ದುಗೊಳಿಸಿದ್ದಾರೆ. ದುರಂತದ ಬಗ್ಗೆ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا