Urdu   /   English   /   Nawayathi

ಅಧಿಕಾರ ನಮ್ಮದೇ : ಬಿಜೆಪಿ, ಜೆಡಿಎಸ್ ಕನಸು ನನಸಾಗದು

share with us

ಬೆಂಗಳೂರು: 06 ಮೇ (ಫಿಕ್ರೋಖಬರ್ ಸುದ್ದಿ) ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅತಂತ್ರ ವಿಧಾನಸಭೆಗೂ ಸೃಷ್ಟಿಯಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ತಂತ್ರಗಾರಿಕೆ ನಡೆಯುವುದಿಲ್ಲ. ಜೆಡಿಎಸ್ ಪಕ್ಷದ ಅಧಿಕಾರದ ಕನಸು ನನಸಾಗುವುದಿಲ್ಲ. ಕಾಂಗ್ರೆಸ್ ಪಕ್ಷವೇ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ.ಇದದರಲ್ಲಿ ಯಾವುದೇ ಸಂಶಯಬೇಡ ಎಂದು ಹೇಳಿದರು.

ಪ್ರೆಸ್ ಕ್ಲಬ್‌ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಸುಳ್ಳು ಆಶ್ವಾಸನೆಗಳನ್ನು ನೀಡಿ, ರಾಜ್ಯದ ಜನರನ್ನು ವಂಚಿಸುವ ಕೆಲಸ ಮಾಡುತ್ತಿದ್ದಾರೆ. ಜನತೆಯೂ ಗಮನಿಸುತ್ತಿದ್ದಾರೆ.ಕಳೆದ ನಾಲ್ಕು ವರ್ಷದ ಕೇಂದ್ರ ಸರ್ಕಾರದ ಅವಧಿಯಲ್ಲಿ ಮಹದಾಯಿಯ ಸಮಸ್ಯೆ ಬಗೆಹರಿಸಲಿಲ್ಲ. ರೈತರ ಸಾಲಮನ್ನಾ ಮಾಡಿಲ್ಲ, ರಾಜ್ಯಕ್ಕೆ ಯಾವುದೇ ವಿಶೇಷ ಪ್ಯಾಕೇಜ್ ಪ್ರಕಟಿಸಿಲ್ಲ, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಮಾತನ್ನು ಜನರು ನಂಬುವಷ್ಟು ದಡ್ಡರಲ್ಲ ಎಂದು ಹೇಳಿದರು.

ಮಹದಾಯಿ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ  ಕಿವಿಗೊಡದ ಪ್ರಧಾನಿ ನರೇಂದ್ರಮೋದಿ ಅವರು, ಚುನಾವಣೆ ಸಮಯದಲ್ಲಿ ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಕಾರಣವೆಂದು ಆರೋಪ ಮಾಡಿದ್ದಾರೆ. ಸೋನಿಯಾ ಪ್ರಧಾನಿಯಾಗಿದ್ದರೆ, ತಮ್ಮ ಜವಬ್ದಾರಿಯನ್ನು ಮತ್ತೊಬ್ಬರ ಮೇಲೆ ವರ್ಗಾಯಿಸುವುದು ಸರಿಯಲ್ಲ ಎಂದು ಹೇಳಿದರು.

ಕೇಂದ್ರದ ಸರ್ಕಾರ ನಾಲ್ಕು ವರ್ಷಗಳಲ್ಲಿ ಸಂಪೂರ್ಣ ವಿಫಲವಾಗಿದೆ. ಅವರಿಗೆ ತಮ್ಮ  ಸಾಧನೆಯನ್ನು ಹೇಳಲು ಪ್ರಧಾನಿಗೆ ಅವಕಾಶವಿಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅದು ಯಾವುದೇ ಕಾರಣಕ್ಕೆ ಫಲಿಸುವುದಿಲ್ಲ ಎಂದು ಹೇಳಿದವರು ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚಿಸುತ್ತಿದೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ವಾಸ್ತವವಾಗಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಡುವೆ ನಡೆಯುತ್ತಿದೆ ಎನ್ನುವುದಾದರೂ ಉತ್ತರ ಕರ್ನಾಟಕದಲ್ಲಿ ಬಿಜೆಪಿ, ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್‌ನೊಂದಿಗೆ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಎದುರಿಸಲಿದೆ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಅಧಿಕಾರಕ್ಕೆ ಬಂದೇ ಬಿಟ್ಟೇವು ಎನ್ನುವ ಭ್ರಮೆಯಲ್ಲಿ ಪ್ರಮಾಣ ವಚನ ಸ್ವೀಕಾರದ ದಿನಾಂಕ ನಿಗದಿ ಮಾಡಿದ್ದಾರೆ. ಅದು ಯಾವುದೇ ಕಾರಣಕ್ಕೂ ಕೈಗೂಡುವುದಿಲ್ಲ. ರಾಜ್ಯದಲ್ಲಿ ನಾವೇ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಛಿತ ಎಂದರು. ಚುನಾವಣೆ ಸಮಯದಲ್ಲಿ ಪ್ರಧಾನಿ ಆದಿಯಾಗಿ ಬಿಜೆಪಿಯ ನಾಯಕರು ಕೀಳುಮಟ್ಟದ ಭಾಷೆ ಬಳಸುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ಆರೋಪಿಸಿದರು.

ದಾಖಲೆ ಬಿಡುಗಡೆ ಮಾಡಿ

೧೦ ಪರ್ಸೆಂಟ್ ಸರ್ಕಾರ, ಸೀದಾ ರುಪ್ಪಯ್ಯ ಸರ್ಕಾರ ಎಂಬ ಆರೋಪ ಮಾಡುವ ಪ್ರಧಾನಿ ನರೇಂದ್ರ ಮೋದಿ ಬಳಿಯ ಅಗತ್ಯ ದಾಖಲೆ ಇದ್ದರೆ ಜನರ ಮುಂದಿನಲ್ಲಿ ಅದನ್ನು ಬಿಟ್ಟು ಇಲ್ಲಸಲ್ಲದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ ಎಂದು ವಾಗ್ದಾಳಿ ನಡೆಸಿದರು.

ನಾವು ೨ ಕಡೆ ಸ್ಪರ್ಧಿಸುವುದಿಲ್ಲ ಪ್ರಶ್ನೆ ಮಾಡುವ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆ ಚುನಾವಣೆಯಲ್ಲಿ ಯಾಕೆ ಎರಡು ಕಡೆ ಸ್ಪರ್ಧೆ ಮಾಡಿದರು. ಈ ಬಗ್ಗೆ ಪ್ರಶ್ನಿಸಲು ಯಾವುದೇ ನೈತಿಕತೆಯಿಲ್ಲ ಎಂದು ಹೇಳಿದರು.

ದಲಿತರ ಅಭಿವೃದ್ಧಿ ಕ್ರಮ

ರಾಜ್ಯದಲ್ಲಿ ದಲಿತರ ಅಭಿವೃದ್ಧಿಗಾಗಿ ಹಾಗೂ ಸಾಮಾಜಿಕ ನ್ಯಾಯ ಕಲ್ಪಿಸಲು ೧೦ ಹಲವು ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಚುನಾವಣಾ ಸಮಯದಲ್ಲಿ ದಲಿತರ ಬಗ್ಗೆ ಹುಸಿ ಪ್ರೀತಿ ತೋರಿಸಿದರೆ ಜನ ನಂಬುವುದಿಲ್ಲ ಎಂದು ಹೇಳಿದರು.

ಸಂ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا