Urdu   /   English   /   Nawayathi

ಶಿವಮೊಗ್ಗ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

share with us

ಶಿವಮೊಗ್ಗ: 17 ಮೇ (ಫಿಕ್ರೋಖಬರ್ ಸುದ್ದಿ) ರಾಜ್ಯಪಾಲರು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಿದರು.

ಈ ವೇಳೆ, ಕೆಲ ಕಾರ್ಯಕರ್ತರು ಟೊಮೆಟೊ ಎಸೆದು ಪ್ರತಿಭಟನೆ ನಡೆಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು 25ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಪ್ರವೀಣ್ ಕುಮಾರ್, ನಗರಾಧ್ಯಕ್ಷ ಎಚ್.ಪಿ. ಗಿರೀಶ್, ರಾಜ್ಯ ಪ್ರಧಾನ  ಕಾರ್ಯದರ್ಶಿಗಳಾದ ಆರ್. ಕಿರಣ್, ಟಿವಿ ರಂಜಿತ್ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا