Urdu   /   English   /   Nawayathi

ಚಲಿಸುತ್ತಿದ್ದ ರೈಲಿಗೆ ಬೆಂಕಿ: ಪ್ರಯಾಣಿಕರು ಪಾರು

share with us

ನವದೆಹಲಿ: 21 ಮೇ (ಫಿಕ್ರೋಖಬರ್ ಸುದ್ದಿ) ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ಹೋಗುತ್ತಿದ್ದ ಆಂಧ್ರ ಪ್ರದೇಶ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಬೋಗಿಗಳಿಗೆ ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

‘ಬೆಂಕಿ ಏಕೆ ಹೊತ್ತಿಕೊಂಡಿತು ಎಂಬುದು ಇನ್ನೂ ತಿಳಿದುಬಂದಿಲ್ಲ. ಅಗ್ನಿ ಅವಗಢದಲ್ಲಿ ಯಾರಿಗೂ ಗಾಯಗಳಾಗಿಲ್ಲ’ ಎಂದು ರೈಲ್ವಿ ಇಲಾಖೆಯ ವಕ್ತಾರ ವೇದ ಪ್ರಕಾಶ್ ತಿಳಿಸಿದ್ದಾರೆ.

ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಕಳಿಸಿರುವ ಎನ್‌ಡಿಟಿವಿ ಸುದ್ದಿ ವಾಹಿನಿಗೆ ಕಳಿಸಿರುವ ವಿಡಿಯೊ ಕ್ಲಿಪ್ಪಿಂಗ್‌ನಲ್ಲಿ ಎರಡು ಹವಾನಿಯಂತ್ರಿತ ಕೋಚ್‌ಗಳ ನಡುವಿನಿಂದ ದಟ್ಟ ಕಪ್ಪು ಹೊಗೆ ಹೊಮ್ಮುತ್ತಿರುವುದು ಕಾಣಿಸುತ್ತದೆ.

‘ಗ್ವಾಲಿಯರ್ ಸಮಿಪದ ಬಿರ್ಲಾ ನಗರ್ ಸ್ಟೇಷನ್‌ ಹತ್ತಿರ ಬೆಳಿಗ್ಗೆ 11.50ರ ಸುಮಾರಿಗೆ ಬಿ6 ಮತ್ತು ಬಿ7 ಬೋಗಿಗಳ ನಡುವೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಹೊತ್ತಿಕೊಂಡಿದ್ದ ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಪ್ರಯಾಣಿಕರನ್ನು ಮತ್ತೊಂದು ಬೋಗಿಗೆ ಸ್ಥಳಾಂತರಿಸಲಾಗಿದೆ’ ಎಂದು ರೈಲ್ವೆ ಇಲಾಖೆ ಹೇಳಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا