Urdu   /   English   /   Nawayathi

ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ಹಲವರ ಬಂಧನ

share with us

ಬೆಂಗಳೂರು: 28 ಮೇ (ಫಿಕ್ರೋಖಬರ್ ಸುದ್ದಿ) ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ ಕರ್ನಾಟಕ ಬಂದ್ ಗೆ ರಾಜ್ಯವ್ಯಾಪಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ನಡೆಯುತ್ತಿದ್ದು, ಸಾರಿಗೆ ಸಂಚಾರ, ಅಂಗಡಿ ಮುಂಗಟ್ಟುಗಳ ವ್ಯವಹಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಮೈಸೂರಿನ ಬನ್ನಿಮಂಟಪದ ಬಳಿ ಸಂಸದ ಪ್ರತಾಪ್ ಸಿಂಹ ಜೊತೆ ಬಿಜೆಪಿ ಕಾರ್ಯಕರ್ತರು ಬಸ್ಸು ತಡೆದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಪೊಲೀಸರು ಸಂಸದ ಪ್ರತಾಪ್ ಸಿಂಹ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಬೈಕ್ ರಾಲಿ ನಡೆಸಿದರು. ಬಸ್ ನಿಲ್ದಾಣದಲ್ಲಿ ರೈತ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

ಆದರೆ, ಬಿಜೆಪಿಯ ಪ್ರಾಬಲ್ಯವಿರುವ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ. ಕೆಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ, ಜನಜೀವನ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ರಾಜ್ಯವ್ಯಾಪಿ ಬಂದ್ ಗೆ ನೀರಸ ಪ್ರತಿಕ್ರೀಯೆ ವ್ಯಕ್ತವಾಗಿದ್ದು ಕೋಲಾರ , ಕೊಪ್ಪಳ , ಧಾರವಾಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಪ್ರದೇಶದಲ್ಲಿ ಬಸ್ಸು ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆದಿದೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا