Urdu   /   English   /   Nawayathi

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ

share with us

ಬೆಂಗಳೂರು: 31 ಮೇ (ಫಿಕ್ರೋಖಬರ್ ಸುದ್ದಿ) ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್. ರಾಜು, ಡಿಐಜಿಗಳಾದ ಎ.ಎಂ.ಪ್ರಸಾದ್, ಗರ್ಗ್, ಎಂ.ಎಂ.ರೆಡ್ಡಿ, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ , ರೌಡಿ ಚಟುವಟಿಕೆಗಳ ನಿಯಂತ್ರಣ ಮುಂತಾದ ವಿಷಯಗಳ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರ ಬದಲಾಗಿದೆ ಎಂದು ಜನರಿಗೆ ಗೊತ್ತಾಗಬೇಕು. ನಗರ ಪ್ರದೇಶಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಬೇಕು. ರೌಡಿ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ನಾವು ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ. ನೀವು ರಾಜಕೀಯ ಹಸ್ತಕ್ಷೇಪಕ್ಕೆ ಒಳಗಾಗಬೇಡಿ.ಮತ್ತೆ ನಿಮ್ಮೊಂದಿಗೆ ಸಭೆ ನಡೆಸಿ ಸುದೀರ್ಘ ಸಮಾಲೋಚನೆ ಮಾಡುತ್ತೇನೆ ಎಂದು ಹೇಳಿದ ಅವರು, ದಕ್ಷತೆಯಿಂದ ಕೆಲಸ ನಿರ್ವಹಿಸುವಂತೆ ಸೂಚಿಸಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا