Urdu   /   English   /   Nawayathi

ಎಚ್‌ಡಿಕೆ 5 ವರ್ಷ ಸಿಎಂ : ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ

share with us

ಬೆಂಗಳೂರು: 02 ಜೂನ್ (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ 5 ವರ್ಷಗಳ ಕಾಲ ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ-ಅತೃಪ್ತಿ ಭುಗಿಲೆದ್ದಿದೆ.

37 ಸ್ಥಾನಗಳನ್ನು ಗೆದ್ದಿರುವ ಜೆಡಿಎಸ್‌ಗೆ ಹಣಕಾಸು ಖಾತೆಯನ್ನೂ ಕೊಟ್ಟು 5 ವರ್ಷಗಳ ಕಾಲ ಮುಖ್ಯಮಂತ್ರಿಯನ್ನು ಬಿಟ್ಟುಕೊಡುವ ನಿರ್ಧಾರ ಮಾಡಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಲು ಸಾಧ್ಯವೇ? ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಹಿರಿಯ ನಾಯಕರು ಬಹಿರಂಗವಾಗಿಯೇ ಅತೃಪ್ತಿಯನ್ನು ಹೊರ ಹಾಕಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ನುಂಗಲಾರದ ತುಪ್ಪವಾಗಿದೆ.

79 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದರೂ ಕೇವಲ 37 ಸ್ಥಾನಗಳನ್ನು ಗೆದ್ದಿರುವ ಜೆಡಿಎಸ್‌ಗೆ 5 ವರ್ಷಗಳ ಕಾಲ ಮುಖ್ಯಮಂತ್ರಿ ಸ್ಥಾನ ನೀಡುವ ಅಗತ್ಯ ಏನಿತ್ತು? ಅಲ್ಲದೆ ಈ ಸಂಬಂಧ ಒಪ್ಪಂದದಲ್ಲಿ ಉಲ್ಲೇಖಿಸಿದ್ದಾದರೂ ಯಾಕೆ ಎಂದು ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನು ನೇರವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರ ದನಿಗೆ ಹಲವು ಹಿರಿಯ ನಾಯಕರು ದನಿಗೂಡಿಸಿದ್ದು, ಜೆಡಿಎಸ್‌ಗೆ 5 ವರ್ಷಗಳ ಕಾಲ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವುದು ಸರಿಯಲ್ಲ. ಒಪ್ಪಂದದಲ್ಲಿ ಈ ವಿಷಯವನ್ನು ಸೇರಿಸುವುದಿಲ್ಲವೆಂದು ಹೇಳಿ ಈಗ ಒಪ್ಪಂದದಲ್ಲಿ ಸೇರಿಸಲಾಗಿದೆ. ಇದು ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ಹಿನ್ನಡೆಯಾಗಲಿದೆ. ಈ ಬಗ್ಗೆ ವರಿಷ್ಠರು ಪರಿಶೀಲಿಸಲು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ಪಕ್ಷಕ್ಕೆ ಪ್ರಮುಖ ಖಾತೆಗಳಾದ ಹಣಕಾಸು, ಲೋಕೋಪಯೋಗಿ, ಇಂಧನ, ಸಹಕಾರ, ಸಾರಿಗೆ ಸೇರಿದಂತೆ ಹಲವು ಮಹತ್ವದ ಖಾತೆಗಳನ್ನೂ ನೀಡಿಯೂ 5 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಟ್ಟಿರುವುದು ಕಾಂಗ್ರೆಸ್‌ಗೆ ಪಕ್ಷವನ್ನು ಸಂಘಟಿಸಲು ಕಷ್ಟಕರವಾಗಲಿದೆ ಎಂದು ಅತೃಪ್ತಿಯನ್ನು ಹೊರ ಹಾಕಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು ಸಮಂಜಸವಾದರೂ ಮುಖ್ಯಮಂತ್ರಿ ಹುದ್ದೆಯನ್ನು 5 ವರ್ಷಗಳ ಕಾಲ ನೀಡುವ ಅಗತ್ಯ ಸರಿಯಲ್ಲ ಎಂದು ಹೇಳಿದ್ದಾರೆ.

ಸಂ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا