Urdu   /   English

ಬಾಂಗ್ಲಾ: ಗುಂಡಿಕ್ಕಿ ಲೇಖಕನ ಹತ್ಯೆ

share with us

ಢಾಕಾ: 13 ಜೂನ್ (ಫಿಕ್ರೋಖಬರ್ ಸುದ್ದಿ) ಜಾತ್ಯತೀತ ತತ್ವ ಪ್ರತಿಪಾದಿಸುತ್ತಿದ್ದ ಲೇಖಕರೊಬ್ಬರನ್ನು ಅಪರಿಚಿತ ದಾಳಿಕೋರರು ಸೋಮವಾರ ಸಂಜೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಬಿಶಾಕಾ ಪ್ರಕಾಶನದ ಪ್ರಕಾಶಕ ಹಾಗೂ ಲೇಖಕ ಷಹಜಹಾನ್‌ ಬಚ್ಚು (60) ದುಷ್ಕರ್ಮಿಗಳ ಗುಂಡಿಗೆ ಬಲಿಯಾದವರು. ಸಾಮಾಜಿಕ ಕಾರ್ಯಕರ್ತರಾಗಿದ್ದ ಅವರು, ಬಾಂಗ್ಲಾದೇಶ ಕಮ್ಯುನಿಸ್ಟ್‌ ಪಾರ್ಟಿಯ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.

ಇಫ್ತಾರ್‌ಗೂ ಮುನ್ನ, ಬಚ್ಚು ಅವರು ತಮ್ಮ ಸ್ನೇಹಿತನನ್ನು ಭೇಟಿಯಾಗಲು ಅವರ ಔಷಧ ಅಂಗಡಿಗೆ ತೆರಳಿದ್ದಾಗ, ಎರಡು ಬೈಕ್‌ಗಳಲ್ಲಿ ಬಂದ ಐವರು ದುಷ್ಕರ್ಮಿಗಳು ಅವರನ್ನು ಹೊರಗೆಳೆದು ಗುಂಡು ಹಾರಿಸಿದ್ದಾರೆ. ಮುನ್ಷಿಗಂಜ್‌ ಜಿಲ್ಲೆಯ ಕಾಕಲ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ದಾಳಿ ಮಾಡುವುದಕ್ಕೂ ಮುನ್ನ, ಉಗ್ರಗಾಮಿಗಳು ಔಷಧ ಅಂಗಡಿ ಎದುರು ಕಚ್ಚಾ ಬಾಂಬ್‌ ಸ್ಫೋಟಿಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರ, ವಾ ವರದಿ

More

Prayer Timings

Fajr 03:46 فجر
Dhuhr 12:58 الظهر
Asr 16:59 أسر
Maghrib 20:31 مغرب
Isha 22:11 عشا

Prayer Timings

Fajr 03:46 فجر
Dhuhr 12:58 الظهر
Asr 16:59 أسر
Maghrib 20:31 مغرب
Isha 22:11 عشا