Urdu   /   English   /   Nawayathi

'ಎಂವಿ ನಳಿನಿ' ಸರಕು ಸಾಗಣೆ ಹಡಗಿನಲ್ಲಿ ಬೆಂಕಿ: ಸಿಬ್ಬಂದಿಗೆ ಗಂಭೀರ ಗಾಯ

share with us

ಕೊಚ್ಚಿ/ಕೇರಳ: 14 ಜೂನ್ (ಫಿಕ್ರೋಖಬರ್ ಸುದ್ದಿ) ‘ಎಂವಿ ನಳಿನಿ’ ಸರಕು ಸಾಗಣೆ ಹಡಗಿನಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು, ಇದರಲ್ಲಿನ 22 ಸಿಬ್ಬಂದಿ ಪೈಕಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಗಾಯಗೊಂಡ ಸಿಬ್ಬಂದಿಯನ್ನು ಕೊಚ್ಚಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೌಕಾಪಡೆಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ’ ಎಂದು ರಕ್ಷಣಾ ವಕ್ತಾರ ತಿಳಿಸಿದ್ದಾರೆ.

ಹಡಗಿನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಿಬ್ಬಂದಿಯ ರಕ್ಷಣೆಗಾಗಿ ಸಾಕಷ್ಟು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. 

ಹೆಚ್ಚಿನ ಕಾರ್ಯಾಚರಣೆ ಅನಿವಾರ್ಯತೆ ಎದುರಾದರೆ ‘ಸೀ ಕಿಂಗ್ 42ಸಿ’ ಹೆಲಿಕಾಪ್ಟರ್‌ ಅನ್ನು ಕಳುಹಿಸಿಕೊಡಲಾಗುವುದು. ಭಾರತೀಯ ಕರಾವಳಿ ರಕ್ಷಣಾ ಪಡೆ ‘ಚಾರ್ಲಿ’ ಎಂಬ ಹಡಗನ್ನು ಕಳುಹಿಸಿಕೊಟ್ಟಿದೆ ಎಂದು ರಕ್ಷಣಾ ವಕ್ತಾರ ತಿಳಿಸಿದ್ದಾರೆ.

ಈ ಹಡಗು ‘ನಾಪ್ತಾ’ ಎಂಬ ರಾಸಾಯನಿಕ ಟ್ಯಾಂಕರ್‌ ಅನ್ನು ಹೊತ್ತೊಯ್ಯುತ್ತಿತ್ತು ಎಂದು ತಿಳಿದು ಬಂದಿದೆ.

ANI✔@ANI

Merchant Vessel SSL KOLKATA caught fire last night; 11 out of 22 crew members rescued by Indian Coast Guard ship Rajkiran from Haldia, rescue operation for remaining crew members underway

1:06 PM - Jun 14, 2018

 ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا