Urdu   /   English   /   Nawayathi

ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಚಿಂತನೆ ಬೆಳೆಸಲು ಕರೆ

share with us

ಬೆಂಗಳೂರು: 19 ಜೂನ್ (ಫಿಕ್ರೋಖಬರ್ ಸುದ್ದಿ) ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೇಳೆ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಲು ಹೆಚ್ಚಿನ ಒತ್ತು ನೀಡಬೇಕು ಎಂದು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಹೇಳಿದರು. ನಗರದಲ್ಲಿಂದು ಬಸವನಗುಡಿ ನ್ಯಾಷನಲ್ ಕಾಲೇಜು ವತಿಯಿಂದ ಆಯೋಜಿಸಿದ್ದ, ಸನ್ಮಾನ ವನ್ನು ಸ್ವೀಕರಿಸಿ ಮಾತನಾಡಿದ ಅವರು, ಇತ್ತೀಚೆಗೆ ವಿಜ್ಞಾನದ ಬಗ್ಗೆ ಓದುವ ಹವ್ಯಾಸ ಕಡಿಮೆ ಆಗುತ್ತಿದೆ. ಹೀಗಾಗಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಈ ಬಗ್ಗೆಯ ಆಸಕ್ತಿ ಹೆಚ್ಚಿಸಬೇಕು ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ವಿಜ್ಞಾನ ಪಾರ್ಕ್ ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಲಾವುದು ಎಂದು ಶಿವ ಶಂಕರ್ ರೆಡ್ಡಿ ಭರವಸೆ ನೀಡಿದರು.

ಕಡುಬಡತನದ ಕುಟುಂಬದಲ್ಲಿ ಜನಿಸಿ, ಸಮಾಜಮುಖಿಯಾಗಿ ಕೆಲಸ ಮಾಡಿದ ನರಸಿಂಹಯ್ಯ ಅವರ ಮೌಲ್ಯಗಳನ್ನು ಪ್ರತಿಯೊಬ್ಬರು ಪಾಲಿಸಬೇಕಾಗಿದೆ. ಅಲ್ಲದೆ, ಅವರು ಜೀವನದುದ್ದಕ್ಕೂ ಸರಳವಾಗಿ ಇತರರಿಗೆ ಮಾದರಿಯಾಗುವಂತೆ ಜೀವನ ನಡೆಸಿದರು ಎಂದರು.

ನ್ಯಾಷನಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ.ಎ.ಎಚ್.ರಾಮರಾವ್ ಮಾತನಾಡಿ, ಇಲ್ಲಿನ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದ ಸಾವಿರಾರು ವಿದ್ಯಾರ್ಥಿಗಳು ದೇಶ?ವಿದೇಶಗಳಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಆದರೆ ಕಲಿತ ನಂತರ ಶಾಲೆ, ಹುಟ್ಟಿದ ಊರನ್ನು ಮರೆಯಬಾರದು. ಎಚ್.ಎನ್. ಅವರ ತತ್ವ ಸಿದ್ದಾಂತಗಳನ್ನು ನಾವು ರೂಢಿಸಿ-ಕೊಳ್ಳಬೇಕು ಎಂದರು.

ಹಳೇ ವಿದ್ಯಾರ್ಥಿಗಳು ಮತ್ತು ನಿವೃತ್ತ ಶಿಕ್ಷಕರ ಅಪೂರ್ವ ಸಮ್ಮಿಲನವಾಗಿತ್ತು. ಇದೇ ವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.ಈ ವೇಳೆ ಹೆಚ್.ವಿ.ನಾಗೇಶ್, ವೆಂಕಟರತ್ನಮ್ಮ ಉಪಸ್ಥಿತರಿದ್ದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا