Urdu   /   English   /   Nawayathi

ಬಿಹಾರದಲ್ಲಿ ಮೈತ್ರಿ ಸರ್ಕಾರವಿದ್ದರೂ 3 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಜೆಡಿಯು ಸ್ಪರ್ಧೆ

share with us

ನವದೆಹಲಿ: 03 ಜುಲೈ (ಫಿಕ್ರೋಖಬರ್ ಸುದ್ದಿ) ಬಿಹಾರದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದರೂ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಜೆಡಿಯು ಸ್ಪರ್ಧಿಸಲು ತೀರ್ಮಾನಿಸಿದೆ.  ಇದೇ ಡಿಸೆಂಬರ್ ತಿಂಗಳ ಅಂತ್ಯಕ್ಕೆ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಢ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಇಲ್ಲಿ ಬಿಜೆಪಿ ಜತೆ ಮೈತಿ ಮಾಡಿಕೊಳ್ಳದೆ ಜೆಡಿಯು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಕಾರ್ಯದರ್ಶಿ ಕೆ.ಸಿ.ತ್ಯಾಗಿ ತಿಳಿಸಿದ್ದಾರೆ.

ಅನಿವಾರ್ಯ ಕಾರಣಗಳಿಂದ ನಾವು ಬಿಹಾರದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ಆದರೆ, ಈ ಮೈತ್ರಿ ಬೇರೆ ರಾಜ್ಯಗಳಿಗೂ ಅನ್ವಯವಾಗುವುದಿಲ್ಲ. ನಾವು ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಗಢದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಅಂಗ ಪಕ್ಷವಾದ ಜೆಡಿಯುಗೆ ಬಿಹಾರದಲ್ಲಿ ಕಡಿಮೆ ಸ್ಥಾನವನ್ನು ಬಿಟ್ಟುಕೊಡಲು ಬಿಜೆಪಿ ಮುಂದಾಗಿದೆ.

2014ರಲ್ಲಿ ಎನ್‍ಡಿಎ ಬಿಹಾರದಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿತ್ತು. ಈಗ ಇದೇ ತಂತ್ರವನ್ನು ಅನುಸರಿಸುತ್ತಿರುವ ಬಿಜೆಪಿ, ನಾವು ಎಷ್ಟು ಸ್ಥಾನ ಬಿಟ್ಟು ಕೊಡಲಿದ್ದೆವೋ ಅಷ್ಟರಲ್ಲಿ ಸ್ಪರ್ಧಿಸಿ ಎಂಬ ಷರತ್ತನ್ನು ವಿಧಿಸಿದೆ. ಆದರೆ, ಬಿಜೆಪಿಯ ಈ ಪ್ರಸ್ತಾಪವನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.  ಬಿಜೆಪಿಗೆ ಪ್ರಧಾನಿ ನರೇಂದ್ರ ಮೋದಿ ದೊಡ್ಡಣ್ಣನಾದರೆ, ಬಿಹಾರಕ್ಕೆ ನಿತೀಶ್‍ಕುಮಾರ್ ದೊಡ್ಡಣ್ಣ. ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದೆ.ಹೀಗೆ ಎರಡು ಪಕ್ಷಗಳ ನಡುವೆ ನಡೆಯುತ್ತಿರುವ ಮಾತಿನ ಸಮರ ಗಮನಿಸಿದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು ಪ್ರತ್ಯೇಕವಾಗಿ ಸ್ಪರ್ಧಿಸಿದರೂ ಅಚ್ಚರಿಯಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا