Urdu   /   English   /   Nawayathi

ಶಿಷ್ಟಾಚಾರ ಸೈಡಿಗಿಡಿ, ಆ್ಯಂಬುಲೆನ್ಸ್’ಗೆ ದಾರಿಬಿಡಿ : ಪೊಲೀಸರಿಗೆ ಪರಮೇಶ್ವರ್ ಸೂಚನೆ

share with us

ಬೆಂಗಳೂರು: 08 ಜುಲೈ (ಫಿಕ್ರೋಖಬರ್ ಸುದ್ದಿ) ಗಣ್ಯ ವ್ಯಕ್ತಿಗಳ ಸಂಚಾರದ ಸಂದರ್ಭದಲ್ಲಿ ಆ್ಯಂಬುಲೆನ್ಸ್ ವಾಹನಗಳು ಯಾವುದೇ ರೀತಿಯ ತೊಂದರೆಯಿಲ್ಲದೆ ಮುಕ್ತವಾಗಿ ಸಂಚರಿಸಲು ಅಗತ್ಯಕ್ರಮ ಕೈಗೊಳ್ಳಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ.ತಾವೂ ಸೇರಿದಂತೆ ಇತರೆ ವಿಐಪಿಗಳಿಗೆ ನೀಡಿರುವ ಶಿಷ್ಟಾಚಾರವನ್ನು ಬದಿಗೊತ್ತಿ ಗಣ್ಯವ್ಯಕ್ತಿಗಳ ಸಂಚಾರದ ಸಂದರ್ಭದಲ್ಲಿ ಆ್ಯಂಬುಲೆನ್ಸ್ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ನಿರೀಕ್ಷಕರಿಗೆ ನಿರ್ದೇಶನ ನೀಡಿದ್ದಾರೆ.

ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ನಿರೀಕ್ಷಕರಿಗೆ ಬರೆದಿರುವ ಪತ್ರದಲ್ಲಿ, ಗಣ್ಯ ವ್ಯಕ್ತಿಗಳು ಸಂಚರಿಸುವಾಗ ಆ್ಯಂಬುಲೆನ್ಸ್ ವಾಹನಗಳನ್ನು ತಡೆದು ನಿಲ್ಲಿಸಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್‍ಗಳಿಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆ್ಯಂಬುಲೆನ್ಸ್ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ತಾವು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಚರಿಸುವ ಮಾರ್ಗಗಳಲ್ಲಿ ಶಿಷ್ಟಾಚಾರದಂತೆ ಸಂಚಾರ ಮುಕ್ತ(ಟ್ರಾಫಿಕ್ ಫ್ರೀ) ಮಾಡುವ ಸಲುವಾಗಿ ಕೆಲವು ಬಾರಿ ಆ್ಯಂಬುಲೆನ್ಸ್ ವಾಹನಗಳನ್ನು ತಡೆದು ನಿಲ್ಲಿಸಿರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಆ ರೀತಿ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا