Urdu   /   English   /   Nawayathi

ಪ್ರಧಾನಿಮೋದಿಗೆ ಪತ್ರ ಬರೆದ ರಾಹುಲ್

share with us

ನವದೆಹಲಿ: 16 ಜುಲೈ (ಫಿಕ್ರೋಖಬರ್ ಸುದ್ದಿ) ಇದೇ 18ರಂದು ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಅಧಿವೇಶದದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಕೋರಿರುವ ಅವರು, ಈ ಕುರಿತು ಮಹಿಳಾ ಕಾಂಗ್ರೆಸ್ 32 ಲಕ್ಷ ಸಹಿ ಸಂಗ್ರಹ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾರ್ಚ್ 9, 2010ರಲ್ಲೇ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡಿಸಲಾಗಿತ್ತು. ಆದರೆ ಅದು ಲೋಕಸಭೆಯಲ್ಲಿ ಇನ್ನೂ ಮಂಡನೆಯಾಗಿಲ್ಲ. 2014ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೂ ಈ ವಿಧೇಯಕವನ್ನು ಅಂಗೀಕರಿಸುವುದಾಗಿ ಹೇಳಿತ್ತು ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا