Urdu   /   English   /   Nawayathi

ರಾಹುಲ್ ಗಾಂಧಿಯನ್ನು ಟೀಕಿಸಿದ ಬಿಎಸ್‍ಪಿ ರಾಷ್ಟ್ರೀಯ ಉಪಾಧ್ಯಕ್ಷನಿಗೆ ಪಕ್ಷದಿಂದ ಕಿಕ್ ಔಟ್

share with us

ಲಕ್ನೋ: 17 ಜುಲೈ (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿದೇಶಿ ಮೂಲವನ್ನು ಟೀಕಿಸಿದ ಮರುದಿನವೇ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ)ದ ರಾಷ್ಟ್ರೀಯ ಉಪಾಧ್ಯಕ್ಷ ಜೈ ಪ್ರಕಾಶ್ ಸಿಂಗ್ ಬೆಲೆ ತೆತ್ತಿದ್ದಾರೆ. ಪಕ್ಷದ ಮುಖ್ಯಸ್ಥೆ ಮಾಯಾವತಿ, ಸಿಂಗ್‍ರನ್ನು ಹುದ್ದೆಯಿಂದ ಹೊರಗಟ್ಟಿದ್ದಾರೆ. ರಾಹುಲ್ ಗಾಂಧಿ ಅವರ ತಾಯಿ (ಸೋನಿಯಾ ಗಾಂಧಿ) ವಿದೇಶಿ ಮೂಲದವರು. ಹೀಗಾಗಿ ರಾಹುಲ್ ಭಾರತೀಯ ರಾಜಕೀಯದಲ್ಲಿ ಎಂದಿಗೂ ಯಶಸ್ಸು ಸಾಧಿಸುವುದಿಲ್ಲ ಎಂದು ಸಿಂಗ್ ಟೀಕಿಸಿದ್ದರು.

ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ವೈಯಕ್ತಿಕವಾಗಿ ಟೀಕಿಸಿದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ಮಾಯಾವತಿ ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರೀಯ ಉಪಾಧ್ಯಕ್ಷ ಹುದ್ದೆಯಿಂದ ಸಿಂಗ್ ಅವರನ್ನು ಕಿತ್ತೆಸೆದಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا