Urdu   /   English   /   Nawayathi

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 8 ಮಂದಿ ಬಲಿ

share with us

ಗಾಂಧಿನಗರ: 18 ಜುಲೈ (ಫಿಕ್ರೋಖಬರ್ ಸುದ್ದಿ) ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ದಾರುಣ ಘಟನೆ ಗುಜರಾತ್‍ನ ರಾಜ್‍ಕೋಟ್-ಮೊರಾಬಿ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮೊಬ್ರಿ ಜಿಲ್ಲೆಯ ಟಂಕಾರಾ ಪಟ್ಟಣದ ಬಳಿ ಸಂಭವಿಸಿದೆ ಭೀಕರ ಅಪಘಾತದ ತೀವ್ರತೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿದು. ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ಎಂಟು ಮಂದಿ ಮೃತಪಟ್ಟು, ಮತ್ತೊಬ್ಬರಿಗೆ ತೀವ್ರ ಗಾಯಗಳಾಗಿವೆ.

ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಆಯುಕ್ತ ಕರಣ್‍ರಾಜ್ ವಘೇಲಾ ತಿಳಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا