Urdu   /   English   /   Nawayathi

ಸಚಿವರ ವಚನದಂತೆ ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಿಬಿಐಗೆ ನೀಡಿ: ಕೋಟಾ ಶ್ರೀನಿವಾಸ್

share with us

ಬೆಂಗಳೂರು: 19 ಜುಲೈ (ಫಿಕ್ರೋಖಬರ್ ಸುದ್ದಿ) ಸದನದಲ್ಲಿಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ವಚನ ನೀಡಿದಂತೆ ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು 15 ದಿನಗಳ ಗಡುವು ನೀಡುತ್ತೇವೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸದಿದ್ದರೆ, ಜಿಲ್ಲಾವ್ಯಾಪ್ಕಿ ಹೋರಾಟ ನಡೆಸುತ್ತೇವೆ. ನಮ್ಮ ಹೋರಾಟದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಖರ್ಚಿಗೆ ಕುತ್ತು ಬರಬಹುದು' ಎಂದು ಎಚ್ಚರಿಕೆ ನೀಡಿದರು. 

ರಾಜ್ಯದಲ್ಲಿ ವಕ್ಫ್ ಆಸ್ತಿ ಕಬಳಿಕೆಯಾಗಿದೆ. ಇದರಲ್ಲಿ ಅನೇಕ ಪ್ರಮುಖ ರಾಜಕಾರಣಿಗಳು ಭಾಗಿಯಾಗಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಆಗ್ರಹಿಸಿದ್ದರು. ಆದರೆ, ಈಗ ಉಲ್ಟಾ ಹೊಡೆಯುತ್ತಿದ್ದಾರೆಂದು ಕೋಟಾ ಶ್ರೀನಿವಾಸ್ ಆರೋಪಿಸಿದ್ದಾರೆ. 

ವಕ್ಫ್ ಮಂಡಳಿಯ ಭೂ ಕಬಳಿಕೆ ಪ್ರಕರಣ ಸಂಬಂಧ 7 ಸಾವಿರ ಪುಟಗಳ ವರದಿ ಸಲ್ಲಿಸಲಾಗಿದೆ. ಬಿಜೆಪಿ ಸರಕಾರ ಈ ವರದಿಯನ್ನು ಸದನದಲ್ಲಿ ಇಟ್ಟಾಗ ಕಾನೂನು ಅಭಿಪ್ರಾಯ ಪಡೆಯಲು ತೀರ್ಮಾನವಾಗಿತ್ತು. ನಂತರ ಸಂಪುಟ ಸಭೆಯಲ್ಲಿ ಕಾನೂನು ವಿಧಾನಗಳ ರೂಪುರೇಷೆ ಸಿದ್ಧವಾಗಿತ್ತು. ಕಬಳಿಕೆಯಾದ ಆಸ್ತಿಯನ್ನು ಮತ್ತೆ ವಾಪಸ್ ಪಡೆಯಲು ಕಾನೂನು ರೂಪಿಸಲು ಕ್ರಮ ಕೈಗೊಳ್ಳಲಾಯಿತು. ಪ್ರಕರಣ ಸಂಬಂಧ ಹೈಕೋರ್ಟ್‌ಗೆ ಹೋದ ಬಳಿಕ ನಮ್ಮದೇ ನಿಲುವನ್ನು ನ್ಯಾಯಾಲಯ ಕೂಡ ವ್ಯಕ್ತಪಡಿಸಿತ್ತು ಎಂದು ಅವರು ವಿವರಿಸಿದ್ದಾರೆ. 

ಇದೇ ವೇಳೆ ಮಾತನಾಡಿದ ಬಿಜೆಪಿ ನಾಯಕ ಅನ್ವರ್ ಮಾಣಿಪ್ಪಾಡಿ, ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುತ್ತೇನೆ ಎಂದು ಸದನದಲ್ಲಿ ಭರವಸೆ ನೀಡಿದ್ದರು. ಅವರು ಹೇಳಿಕೆಯ ಸಿಡಿ ನಮ್ಮ ಬಳಿ ಇದೆ. ಆದರೆ, ಈ ಸಿಡಿ ಬಿಡುಗಡೆ ಮಾಡಲು ಅನುಮತಿ ಪಡೆಯಬೇಕು. ಅಗತ್ಯ ಬಿದ್ದರೆ ಮತ್ತೊಮ್ಮೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. 

ವಿ, ಕ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا