Urdu   /   English   /   Nawayathi

ಆಗಸ್ಟ್ ಅಂತ್ಯದ ವೇಳೆಗೆ ಬ್ಲಾಕ್ ಮತ್ತು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ

share with us

ಬೆಂಗಳೂರು: 21 ಜುಲೈ (ಫಿಕ್ರೋಖಬರ್ ಸುದ್ದಿ) ನಿಷ್ಕ್ರಿಯವಾಗಿರುವ ಬ್ಲಾಕ್ ಕಾಂಗ್ರೆಸ್ ಮತ್ತು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳನ್ನು ಆಗಸ್ಟ್ ಅಂತ್ಯದೊಳಗೆ ಬದಲಾವಣೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.ಕಾಂಗ್ರೆಸ್ ಪಕ್ಷ ಸದೃಢವಾಗಲು ಬ್ಲಾಕ್ ಕಾಂಗ್ರೆಸ್ ಬಹು ಮುಖ್ಯ ಪಾತ್ರ ವಹಿಸುತ್ತದೆ. ಬ್ಲಾಕ್ ಕಾಂಗ್ರೆಸ್ ನಿಷ್ಕ್ರಿಯವಾದರೆ ಪಕ್ಷ ಸದೃಢ ವಾಗಲು ಸಾಧ್ಯವಾಗುವುದಿಲ್ಲ. ಹೀಗಾಗಿ ನಿಷ್ಕ್ರಿಯವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳನ್ನು ಆಗಸ್ಟ್ ಅಂತ್ಯದೊಳಗೆ ಬದಲಾವಣೆ ಮಾಡಲಾಗು ವುದು ಎಂದು ಹೇಳಿದರು.

ಗುರುನಾನಕ್ ಭವನದಲ್ಲಿ ಪಕ್ಷದ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಭಾವಿಗಳು, ಅವರ ಹಿಂಬಾಲಕರಾಗಿದ್ದರೂ ಕೂಡ ಅವರು ನಿಷ್ಕ್ರಿಯವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಬದಲಾವಣೆ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿ ಈ ಕ್ರಮ ಕೈಗೊಳ್ಳಲಾಗುವುದು. ಆಗಸ್ಟ್ ಅಂತ್ಯದೊಳಗೆ ಬ್ಲಾಕ್, ಡಿಸಿಸಿ ಪುನರ್‍ರಚನೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾವಾರು ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಕೆಪಿಸಿಸಿಯಿಂದ ಈ ಕುರಿತು ಪೂರ್ವ ತಯಾರಿ ಮಾಡಿಕೊಳ್ಳ ಲಾಗುತ್ತಿದೆ. ಐದು ವರ್ಷ ಉತ್ತಮ ಆಡಳಿತ ನೀಡಿದರೂ ಪಕ್ಷ ಅಧಿಕಾರಕ್ಕೆ ಬರಲಿಲ್ಲ ಎಂದು ಕಾರ್ಯಕರ್ತರು ನಿರುತ್ಸಾಹಿಗಳಾಗಿದ್ದಾರೆ. ಅವರಲ್ಲಿ ಹೊಸ ಚೈತನ್ಯ ತುಂಬಬೇಕಿದೆ. ಸದ್ಯದಲ್ಲೇ ಕ್ವಿಟ್ ಇಂಡಿಯಾ ಚಳವಳಿ ಅಂಗವಾಗಿ ಅದ್ಧೂರಿಯಾಗಿ ಆಚರಣೆ ಮಾಡುವ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‍ನ ಪಾತ್ರವನ್ನು ಕಾರ್ಯಕರ್ತರಿಗೆ ತಿಳಿಸಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷ್ ಸರ್ಕಾರದಲ್ಲಿ ದೇಶಕ್ಕಾಗಿ ಕಾಂಗ್ರೆಸ್‍ನ ಎಲ್ಲ ಮುಖಂಡರು ರಾಜೀನಾಮೆ ನೀಡಿ ಹೊರಬಂದಿದ್ದರು.

ಆದರೆ, ಆರ್‍ಎಸ್‍ಎಸ್ ಮತ್ತು ಹಿಂದೂ ಮಹಾಸಭಾದವರು ಬ್ರಿಟಿಷರೊಂದಿಗೆ ಶಾಮೀಲಾಗಿ ಹುದ್ದೆ ಪಡೆದುಕೊಂಡಿದ್ದರು. ಈ ಎಲ್ಲ ಅಂಶಗಳನ್ನು ನಾವು ನಮ್ಮ ಕಾರ್ಯಕರ್ತರಿಗೆ ತಿಳಿಸಬೇಕಾಗಿದೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ ಅವರನ್ನು ನೇಮಕ ಮಾಡಿದ ಎಐಸಿಸಿಗೆ ಅಭಿನಂದನೆ ಸಲ್ಲಿಸುವುದು. ಐದು ವರ್ಷ ಸಮರ್ಥ ಆಡಳಿತ ನೀಡಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇ.36 ರಷ್ಟು ಮತ ಗಳಿಕೆಗೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸತತ ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಮುನ್ನಡೆಸಿದ ಡಾ.ಜಿ.ಪರಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸುವ ಮೂರು ನಿರ್ಣಯ ಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا