Urdu   /   English   /   Nawayathi

ಚೆನ್ನೈ; ಲೋಕಲ್ ಟ್ರೇನ್ ಫುಟ್‏ಬೋರ್ಡ್ ಪ್ರಯಾಣ; ಗೋಡೆಗೆ ಬಡಿದು ಏಳು ಮಂದಿ ಸಾವು

share with us

ಚೆನ್ನೈ; 24 ಜುಲೈ (ಫಿಕ್ರೋಖಬರ್ ಸುದ್ದಿ) ಸೈಂಟ್ ಮೌಂಟ್ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ನೂಕುನುಗ್ಗಲು ಸಂಭವಿಸಿದ ಪರಿಣಾಮ ಗೋಡೆಗೆ ಬಡಿದು 7 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ರೈಲು ಚೆನ್ನೈ ಬೀಚ್ ನಿಂದ ತಿರುಮಲ್ಪುರದತ್ತ ಸಾಗುತ್ತಿರುವ ವೇಳೆ ಸೈಂಟ್ ಮೌಂಟ್ ರೈಲು ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. 

ಫುಟ್ ಬೋರ್ಡ್ ನಲ್ಲಿ 30 ಮಂದಿ ಪ್ರಯಾಣ ಮಾಡುತ್ತಿದ್ದರು. ರೈಲು ಸೈಂಟ್ ಮೌಂಟ್ ನಿಲ್ದಾಣದ ಬಳಿ ಬರುತ್ತಿದ್ದಂತೆಯೇ ನೂಕುನುಗ್ಗಲು ಏರ್ಪಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ವಿದ್ಯುತ್ ಕಂಬ ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಲವು ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ. ಇದರಲ್ಲಿ ಇಬ್ಬರು ರೈಲುಗಳ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

ದುರ್ಘಟನೆ ಸಂಭವಿಸುತ್ತಿದ್ದಂತೆಯೇ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದಿದ್ದಾರೆ. ರೈಲು ನಿಂತ ಬಳಿಕ ಗಾಯಾಳುಗಳನ್ನು ರಕ್ಷಣೆ ಮಾಡಲಾಗಿದೆ. 

ಇಂದು ಸಂಭವಿಸಿದ ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಐವರ ಪೈಕಿ ಮೂವರನ್ನು ಶಿವಕುಮಾರಿ, ಭಾರತಿ, ಶಂಕರ್ ಎಂದು ಗುರ್ತಿಸಲಾಗಿದೆ. ಮತ್ತಿಬ್ಬರ ಗುರುತುಗಳು ಈ ವರೆಗೂ ಪತ್ತೆಯಾಗಿಲ್ಲ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ರೈಲ್ವೇ ಪೊಲೀಸರು ಮಾಹಿತಿ ನೀಡಿದ್ದಾರೆ. 

ಚೆನ್ನೈ ಬೀಚ್ ಮತ್ತು ಗಿಂಡಿ ವಿಭಾಗದಲ್ಲಿ ಬರುತ್ತಿದ್ದ ರೈಲುಗಳು ಸೇವೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ವ್ಯತ್ಯಯ ಉಂಟಾಗಿತ್ತು. ಕೊಡಂಬಕ್ಕಮ್ ನಿಲ್ದಾಣ ಬಳಿ ಸಿಗ್ನಲ್ ಕೂಡ ಸರಿಯಾಗಿರಲಿಲ್ಲ. ಹೀಗಾಗಿ ಚೆನ್ನೈ ಬೀಚ್-ತಿರುಮಲ್ಪುರ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು ಎಂದು ರೈಲ್ವೇ ಮೂಲಗಳು ಮಾಹಿತಿ ನೀಡಿವೆ. 

ಪ್ರಕರಣ ಸಂಬಂಧ ರೈಲ್ವೇ ಇಲಾಖೆಯ ಅಧಿಕಾರಿಗಳು ಹಾಗೂ ಸರ್ಕಾರ ತನಿಖೆ ಆರಂಭಿಸಿವೆ. ಗಾಯಾಳುಗಳನ್ನು ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಹಿನ್ನಲೆಯಲ್ಲಿ 30 ನಿಮಿಷಗಳ ಕಾಲ ರೈಲು ಸೇವೆಗಳಲ್ಲಿ ವ್ಯತ್ಯಯಗಳು ಉಂಟಾಗಿತ್ತು. ಘಟನೆ ಬಳಿಕ ಕೆಲ ರೈಲ್ವೇ ಪ್ರಯಾಣಿಕರು ಸುರಕ್ಷತೆ ಆಗ್ರಹಿಸಿ ಪ್ರತಿಭಟನೆಗಳನ್ನೂ ಕೂಡ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا