Urdu   /   English   /   Nawayathi

ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಪಿಟಿಐ, ಪಾಕಿಸ್ತಾನಕ್ಕೆ ಇಮ್ರಾನ್ ಕ್ಯಾಪ್ಟನ್..!

share with us

ಇಸ್ಲಾಮಾಬಾದ್: 26 ಜುಲೈ (ಫಿಕ್ರೋಖಬರ್ ಸುದ್ದಿ) ಕ್ರಿಕೆಟ್ ತಂಡದ ಮಾಜಿ ನಾಯಕ 65 ವರ್ಷದ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಸಾರ್ವತ್ರಿಕ ಚುನಾವಣೆಯಲ್ಲಿ 122 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದರೊಂದು ಇಮ್ರಾನ್ ಪಾಕಿಸ್ತಾನದ ಮುಂದಿನ ಕ್ಯಾಪ್ಟನ್ ಆಗುವುದು ಬಹುತೇಕ ನಿಶ್ಚಿತವಾಗಿದೆ. 272 ಸ್ಥಾನಗಳ ರಾಷ್ಟ್ರೀಯ ಅಸ್ಲೆಂಬಿಯಲ್ಲಿ ಇಂದು ಬೆಳಗ್ಗೆ ಮತ ಎಣಿಕೆ ಪ್ರಗತಿಯಲ್ಲಿದ್ದಾಗ 122 ಸ್ಥಾನಗಳನ್ನು ಗಳಿಸಿ ಪಿಟಿಐ ಅತಿದೊಡ್ಡ ಏಕೈಕ ಪಕ್ಷವಾಗಿ ಹೊರ ಹೊಮ್ಮಿ ಸರ್ಕಾರ ರಚನೆಯತ್ತ ದಾಪುಗಾಲು ಹಾಕಿತ್ತು.  ನಿನ್ನೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ್ದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ನೇತೃತ್ವದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್) 65 ಸ್ಥಾನಗಳನ್ನು ಗಳಿಸಿತ್ತು.

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) 44 ಸ್ಥಾನಗಳನ್ನು ಹಾಗೂ ಇತರ ಪಕ್ಷಗಳು 17 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದವು.  ಹೊಸ ಚುನಾವಣಾ ವ್ಯವಸ್ಥೆಯಿಂದಾಗಿ ಕೆಲಕಾಲ ಮತ ಎಣಿಕೆ ಕಾರ್ಯ ವಿಳಂಬವಾಗಿತ್ತು. ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಫಲಿತಾಂಶದ ಚಿತ್ರಣ ಲಭಿಸಲಿದೆ.   ರಾಷ್ಟ್ರೀಯ ಅಸೆಂಬ್ಲಿಯೊಂದಿಗೆ ನಾಲ್ಕು ಪ್ರಾಂತೀಯ ವಿಧಾನಸಭೆಗಳಾದ ಪಂಜಾಬ್, ಸಿಂಧ್, ಬಲೂಚಿಸ್ತಾನ್ ಮತ್ತು ಖೈಬರ್-ಪಖ್ತುನ್‍ಖ್ವಾಗಳಲ್ಲೂ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ತೀವ್ರ ಪೈಪೋಟಿ  ಏರ್ಪಟ್ಟಿದೆ.  ಪಿಟಿಐ ವಿಜಯದತ್ತ ಮುನ್ನಡೆ ಸಾಧಿಸುತ್ತಿದ್ದಂತೆ ಇಮ್ರಾನ್ ಬಣದ ಕಾರ್ಯಕರ್ತರು ಪಾಕಿಸ್ತಾನದ ವಿವಿಧೆಡೆ ವಿಜಯೋತ್ಸವ ಆಚರಿಸಿದರು.

ಇನ್ನೊಂದೆಡೆ, ಚುನಾವಣೆಗಳಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪಿಎಂಎಲ್-ಎನ್ ಕಾರ್ಯಕರ್ತರು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.  ನಿನ್ನೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂಬ ಪದಚ್ಯುತ ಪ್ರಧಾನಮಂತ್ರಿ ನವಾಜ್ ಷರೀಫ್ ನೇತೃತ್ವದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್) ಆರೋಪಗಳನ್ನು ಪಾಕ್ ಚುನಾವಣಾ ಆಯೋಗ ತಳ್ಳಿ ಹಾಕಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا