Urdu   /   English   /   Nawayathi

ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಗಸ್ಟ್ 11ರಂದು ಅಧಿಕಾರ ಸ್ವೀಕಾರ

share with us

ಇಸ್ಲಾಮಾಬಾದ್: 30 ಜುಲೈ (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸುವುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 65ರ ಹರೆಯದ ಪಾಕಿಸ್ತಾನ ಟೆಹ್ರೀಕ್-ಇ-ಇನ್ಸಾಫ್ ಕಳೆದ 25ರಂದು ನಡೆದ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಪೂರ್ಣಪ್ರಮಾಣದಲ್ಲಿ ಸರ್ಕಾರ ರಚಿಸಲು ಬೇಕಾಗುವಷ್ಟು ಸ್ಥಾನಗಳ ಬಲ ಅದರ ಬಳಿಯಿಲ್ಲ.

ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳ ಬೆಂಬಲ ಪಡೆದುಕೊಂಡು ಸರ್ಕಾರ ರಚಿಸುತ್ತೇವೆ. ಮುಂದಿನ ಆಗಸ್ಟ್ 11ರಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಪಾಕಿಸ್ತಾನ ರೇಡಿಯೊ ವರದಿ ಮಾಡಿದೆ.

ಕೈಬರ್ ಪಕ್ತುಂಖ್ವಾ ಪ್ರಾಂತ್ಯ ವಿಧಾನಸಭೆ ಫಲಿತಾಂಶ ಮುಂದಿನ 48 ಗಂಟೆಗಳಲ್ಲಿ ಪ್ರಕಟವಾಗಲಿದ್ದು, ಅಲ್ಲಿಗೆ ಮುಖ್ಯಮಂತ್ರಿಯನ್ನು ಕೂಡ ನಿರ್ಧರಿಸಿದ್ದೇನೆ. ಜನರ ಹಿತಾಸಕ್ತಿ ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪಿಟಿಐ ಸದಸ್ಯರನ್ನುದ್ದೇಶಿಸಿ ಇಮ್ರಾನ್ ಖಾನ್ ಹೇಳಿದರು.

ಇದಕ್ಕೂ ಮುನ್ನ ಅವರು ಆಗಸ್ಟ್ 14ರಂದು ಪ್ರಧಾನಿಯಾಗಿ ಅಧಿಕಾರ ವಹಿಸುತ್ತಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا