Urdu   /   English   /   Nawayathi

ರಾಂಚಿಯಲ್ಲಿ ಒಂದೇ ಕುಟುಂಬದ 7 ಮಂದಿ ಶಂಕಾಸ್ಪದ ಸಾವು..!

share with us

ರಾಂಚಿ: 30 ಜುಲೈ (ಫಿಕ್ರೋಖಬರ್ ಸುದ್ದಿ) ಎರಡು ಶಿಶುಗಳೂ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ಜಾರ್ಖಂಡ್ ರಾಜಧಾನಿ ರಾಂಚಿಯ ಕೊಂಕೆ ಪ್ರದೇಶದ ಮನೆಯೊಂದರಲ್ಲಿ ಇಂದು ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಸಾಮೂಹಿಕ ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಹಸುಳೆಗಳು ಮತ್ತು ಐವರು ವಯಸ್ಕರರು ಮೃತಪಟ್ಟಿದ್ದಾರೆ. ಕೊಂಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನಿಸ್ ಗುಪ್ರಾ ತಿಳಿಸಿದ್ದಾರೆ.   ಇಬ್ಬರು ಶಿಶುಗಳನ್ನು ಕೊಂದು ನಂತರ ದೊಡ್ಡವರು ಸಾವಿಗೆ ಶರಣಾಗಿದ್ದಾರೆ ಎಂಬ ಶಂಕೆ ಇದ್ದು, ಮರಣೋತ್ತರ ಪರೀಕ್ಷೆ ನಂತರ ಸ್ಪಷ್ಟ ಕಾರಣ ಲಭಿಸಲಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ 11 ಜನರ ಸಾಮೂಹಿಕ ಆತ್ಮಹತ್ಯೆಯ ಬುರಾರಿ ಪ್ರಕರಣದ ಬೆನ್ನಲ್ಲೇ ಜÁರ್ಖಂಡ್‍ನಲ್ಲಿ ಈ ಘಟನೆ ಸಂಭವಿಸಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا