Urdu   /   English   /   Nawayathi

ಪಾಕ್ ಪ್ರಧಾನಿ ಪ್ರಮಾಣವಚನಕ್ಕೆ ಮೋದಿ ಆಹ್ವಾನಿಸುವ ವರದಿ ನಿರಾಕರಿಸಿದ ಪಿಟಿಐ

share with us

ಇಸ್ಲಾಮಾಬಾದ್: 01 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದಲ್ಲಿ ಹೊಸ ಸರ್ಕಾರ ರಚನೆಗೆ ಸಜ್ಜಾಗಿರುವ ತೆಹ್ರೀಕ್-ಎ-ಇನ್ಸಾಫ್(ಪಿಟಿಐ), ತಮ್ಮ ಮುಖ್ಯಸ್ಥ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿದೇಶಿ ನಾಯಕರನ್ನು ಆಹ್ವಾನಿಸುವ ವರದಿಗಳನ್ನು ತಳ್ಳಿ ಹಾಕಿದೆ.  ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಾಕಿಸ್ತಾನ ವಿದೇಶಾಂಗ ಕಚೇರಿ ಜೊತೆ ಸಮಾಲೋಚನೆ ನಡೆಸಿದ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಪಿಟಿಐ ವಕ್ತಾರ ಫವದ್ ಚೌಧರಿ ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಿ ಇಮ್ರಾನ್ ಖಾನ್ ಆಗಸ್ಟ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಸಾರ್ಕ್ ದೇಶಗಳ ನಾಯಕರನ್ನು ಈ ಸಮಾರಂಭಕ್ಕೆ ಪಕ್ಷವು ಆಹ್ವಾನಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಇದನ್ನು ಪಿಟಿಐ ನಿರಾಕರಿಸಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا