Urdu   /   English   /   Nawayathi

ಬಸ್-ಟ್ಯಾಂಕರ್ ನಡುವೆ ಭೀಕರ ಅಪಘಾತ : 20 ಮಂದಿ ದುರ್ಮರಣ

share with us

ಪೇಶಾವರ್: 05 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಬಸ್ ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 20 ಮಂದಿ ಮೃತಪಟ್ಟ ಭೀಕರ ಘಟನೆ ವಾಯುವ್ಯ ಪಾಕಿಸ್ತಾನದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.  ಖೈಬರ್ ಫಕ್ತುನ್‍ಖ್ವಾ ಪ್ರಾಂತ್ಯದ ಕೋಹಾಟ್ ಜಿಲ್ಲೆಯ ಸಮರಿ ಪ್ರದೇಶದಲ್ಲಿ ಬಳಿ ಈ ದುರಂತ ಸಂಭವಿಸಿದೆ. ಬುನೆರ್‍ನಿಂದ ಕರಾಚಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಮತ್ತು ಎದುರು ದಿಕ್ಕಿನಿಂದ ಬರುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಮಕ್ಕಳು ಮತ್ತು ಮಹಿಳೆಯರೂ ಸೇರಿದಂತೆ 20 ಮಂದಿ ಮೃತಪಟ್ಟು 35 ಜನರು ಗಾಯಗೊಂಡರು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا