Urdu   /   English   /   Nawayathi

ನೆರೆಪೀಡಿತ ಕೇರಳಕ್ಕೆ ಒಂದು ತಿಂಗಳ ವೇತನ ನೀಡಿದ ರೇವಣ್ಣ-ಉಗ್ರಪ್ಪ..!

share with us

ಬೆಂಗಳೂರು: 13 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಅತಿಯಾದ ಮಳೆಯಿಂದ ಪ್ರವಾಹ ಪೀಡಿತ ಕೇರಳ ರಾಜ್ಯದ ಸಂತ್ರಸ್ಥರ ನೆರವಿಗೆ ವಿಧಾನಪರಿಷತ್ ಸದಸ್ಯರಾದ ವಿ.ಎಸ್.ಉಗ್ರಪ್ಪ ಹಾಗೂ ಎಚ್.ಎಂ.ರೇವಣ್ಣ ಒಂದು ತಿಂಗಳ ವೇತನ ನೀಡಲು ನಿರ್ಧರಿಸಿದ್ದಾರೆ. ಕೇರಳದಲ್ಲಿ ಭಾರೀ ಮಳೆಯಾಗಿ ಜನರು ಸಂಕಷ್ಟಕ್ಕೀಡಾಗಿದ್ದು, ಸಂತ್ರಸ್ಥರ ನೆರವಿಗೆ ಒಂದು ಲಕ್ಷ ವೇತನ ನೀಡುವುದಾಗಿ ಉಗ್ರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಿಂದ ಉತ್ತರ ಪ್ರದೇಶಕ್ಕೆ ಏರ್‍ಶೋ ಸ್ಥಳಾಂತರಿಸುತ್ತಿರುವುದನ್ನು ಮತ್ತೆ ಬೆಂಗಳೂರಿಗೆ ವಾಪಸ್ ತರಲು ಕೇಂದ್ರದ ಮೇಲೆ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಒತ್ತಡ ಹೇರಬೇಕು. ಸಾಧ್ಯವಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಕೇಂದ್ರ ಸಚಿವರಾದ ಅನಂತ್‍ಕುಮಾರ್, ಸದಾನಂದಗೌಡ ಹಾಗೂ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರನ್ನು ಪ್ರತಿನಿಧಿಸುತ್ತಿದ್ದರೂ ಏರ್‍ಶೋ ಉತ್ತರ ಪ್ರದೇಶಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿದರು. ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ಯಾವುದೇ ಕಾರಣವಿಲ್ಲದೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಏರ್‍ಶೋವನ್ನು ಲಕ್ನೋಗೆ ಸ್ಥಳಾಂತರಿಸುತ್ತಿದೆ ಎಂದು ಆರೋಪಿಸಿದರು.

ರಾಜಕೀಯ ಲಾಭಕ್ಕಾಗಿ ವೈಮಾನಿಕ ಪ್ರದರ್ಶನವನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಏಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು. ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಬಗೆಹರಿಸುವುದಾಗಿ ಹೇಳಿದ್ದ ಕಳಸಾ ಬಂಡೂರಿ ನಾಲಾ ಜೋಡಣೆ ಇನ್ನೂ ಹಾಗೆ ಉಳಿದಿದೆ. ಯೋಜನೆ ಅನುಷ್ಠಾನಕ್ಕಾಗಿ ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ ಬಿಜೆಪಿ ನಾಯಕರು ಚಕಾರವೆತ್ತುತ್ತಿಲ್ಲ ಎಂದು ಟೀಕಿಸಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا