Urdu   /   English   /   Nawayathi

ಲೋಕಸಭಾ ಚುನಾವಣೆ: ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತ

share with us

ಹಾಸನ: 13 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದೋ ನಿಶ್ಚಿತವಾಗಿದೆ. ಹರದನಹಳ್ಳಿಯಲ್ಲಿ ಈಶ್ವರ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು ಹಾಸನದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯುವ ಕುರಿತು ಸುಳಿವು ನೀಡಿದ್ದಾರೆ. ಕುಮಾರಸ್ವಾಮಿ ಈಗ ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ಇನ್ನೂ 10 ವರ್ಷ ಇಲ್ಲೇ ಇರುತ್ತಾರೆ ಎಂದು ದೇವೇಗೌಡರು ಹೇಳಿರುವುದಾಗಿ ವರದಿಯಾಗಿದೆ. 

ಪ್ರಜ್ವಲ್ ರೇವಣ್ಣ ಲೋಕಸಭೆ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಪ್ರಜ್ವಲ್ ರೇವಣ್ಣ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮುಂದೆ ನಿರ್ಧಾರವಾಗಲಿದೆ ಎಂದು ತಿಳಿಸಿದ ಅವರು ಪ್ರಜ್ವಲ್ ಹಾಸನದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ಇಂದು ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಎಚ್‍ಡಿಡಿ ಕುಟುಂಬದ ಮನೆ ದೇವರು ಹೊಳೆನರಸೀಪುರದ ಹರದನಹಳ್ಳಿ ಈಶ್ವರ ದೇವಾಲಯ, ಅವರ ತಂದೆಯ ಮೆಚ್ಚಿನ ದೈವ ಮಾವಿನ ಕೆರೆ ಬೆಟ್ಟದ ರಂಗನಾಥಸ್ವಾಮಿ ಸೇರಿದಂತೆ ಅವರ ಕುಲದೈವದ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಕ, ಕ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا