Urdu   /   English   /   Nawayathi

ಫ್ಲೆಕ್ಸ್, ಬ್ಯಾನರ್ ತೆರವಿಗೆ ಆಗಸ್ಟ್ 31ರ ವರೆಗೆ ಅವಕಾಶ ನೀಡಿದ ಹೈಕೋರ್ಟ್

share with us

ಬೆಂಗಳೂರು: 14 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ನಗರದಲ್ಲಿನ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ತೆರವುಗೊಳಿಸಲು ತೆಗೆದುಕೊಂಡ ಕ್ರಮಗಳ ಕುರಿತು ಪ್ರಮಾಣಪತ್ರ ಸಲ್ಲಿಸಲು ವಿಫಲವಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮಂಗಳವಾರ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಫ್ಲೆಕ್ಸ್ ಹಾಗೂ ಬ್ಯಾನರ್ ತೆರವಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನೇತೃತ್ವದ ವಿಭಾಗೀಯ ಪೀಠ, ಆಗಸ್ಟ್ 31ರೊಳಗೆ ನಗರ ಫ್ಲೆಕ್ಸ್ ಹಾಗೂ ಬ್ಯಾನರ್ ಮುಕ್ತವಾಗಬೇಕು ಎಂದು ಬಿಬಿಎಂಪಿಗೆ ಆದೇಶಿಸಿದೆ.

ಇದೇ ವೇಳೆ ಜಾಹೀರಾತು ನೀತಿ ರಚಿಸಲು ತಡ ಮಾಡುತ್ತಿರುವ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ಕೋರ್ಟ್, ಬಿಬಿಎಂಪಿಗೆ ಮತ್ತೆ ಛೀಮಾರಿ ಹಾಕಿತು.

ಈ ವೇಳೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಅವರು, ಜಾಹೀರಾತು ನೀತಿಯ ಕರಡು ಪ್ರತಿಯನ್ನು ಕೋರ್ಟ್ ಗೆ ಸಲ್ಲಿಸಿದರು. ಅಲ್ಲದೆ ತಜ್ಞರು, ವಿವಿಧ ಇಲಾಖೆಗಳ ಮುಖ್ಯಸ್ಥರ, ಸರ್ಕಾರೇತರ ಸ್ವಯಂ ಸಂಸ್ಥೆಗಳ ಜತೆ ಚರ್ಚಿಸಿ ನಿಯಮ ರೂಪಿಸಲಾಗುವುದು ಎಂದು ಹೇಳಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಾಹೇಶ್ವರಿ ಅವರು, ನಿಮ್ಮ ಅಧಿಕಾರಿಗಳು ಏನ್​ ಮಾಡ್ತಿದ್ದಾರೆ? ಅಧಿಕಾರಿಗಳು ಸಂಬಳ ಪಡೆಯುತ್ತಿಲ್ಲವೇ? ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಲೇಬೇಕು. ಅಧಿಕಾರಿಗಳ ಈ ರೀತಿಯ ನಿರ್ಲಕ್ಷ್ಯದ ವರ್ತನೆಯನ್ನು ಕೋರ್ಟ್ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ, ಫ್ಲೆಕ್ಸ್ ಬ್ಯಾನರ್ ತೆರವು ಸಂಬಂಧ ಯಾವ ವೆಬ್ ಸೈಟ್​ನಲ್ಲಿ ಪ್ರಕಟಿಸಿದ್ದೀರಾ.? ಇಂತಹ ವಿಚಾರಗಳಲ್ಲಿ ಮೊದಲು ಸಾರ್ವಜನಿಕರಿಗೆ ಮಾಹಿತಿ ನೀಡುವುದು ನಿಮ್ಮ ಕರ್ತವ್ಯ. ನಿಮಗೆ ಕೋರ್ಟ್ ಆದೇಶದ ಬಗ್ಗೆ ಅರಿವಿಲ್ಲವಾ? ಇಲ್ಲಿಯವರೆಗೂ ಎಷ್ಟೂ ಅನಧಿಕೃತ ಫ್ಲೆಕ್ಸ್​ ಬ್ಯಾನರ್​ ತೆರವುಗೊಳಿಸಿದ್ದೀರಿ‌? ಕೋರ್ಟ್​ಗೆ ಸ್ಪಷ್ಟವಾದ ಅಂಕಿ ಅಂಶಗಳ ಮಾಹಿತಿ ನೀಡಿ. ನಮಗೆ ನಿಮ್ಮ ಸಬೂಬುಗಳು ಬೇಕಾಗಿಲ್ಲ ಎಂದು ಕೋರ್ಟ್‌ ಬಿಬಿಎಂಪಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡಿತು. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا