Urdu   /   English   /   Nawayathi

ಗಂಜಿ ಕೇಂದ್ರದಲ್ಲಿರುವ ನಿರಾಶ್ರಿತರಿಗೆ ಧೈರ್ಯ ತುಂಬಿದ ಸಿಎಂ, ನಾಳೆಯೂ ಕೊಡಗಿನಲ್ಲಿ ಪ್ರವಾಸ

share with us

ಮಡಿಕೇರಿ: 18 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ನಗರದ ಮೈತ್ರಿ ಭವನದ ಗಂಜಿ ಕೇಂದ್ರದಲ್ಲಿರುವ ನಿರಾಶ್ರಿತರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಭೇಟಿ ಮಾಡಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು ನಿರಾಶ್ರಿತರು ಹೊಸ ಜೀವನ ನಡೆಸಲು ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದ್ದು, ಯಾರೂ ಸಹ ಆತಂಕಪಡಬಾರದು ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು. ಮನೆ ಕಳೆದು ಕೊಂಡವರಿಗೆ ಮನೆ ನಿರ್ಮಿಸಿಕೊಡಲಾಗುವುದು, ನಿರಾಶ್ರಿತರಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ನೀಡಲಿದ್ದು, ಸರ್ಕಾರವೇ ಜವಾಬ್ದಾರಿ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವ ಪ್ರಕಟಿಸಿದರು.  ನಿರಾಶ್ರಿತರಿಗೆ ಗಂಜಿ ಕೇಂದ್ರದಲ್ಲಿ ತಾತ್ಕಾಲಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ. ನಿರಾಶ್ರಿತರ ನೋವು ಸರ್ಕಾರಕ್ಕೆ ಅರ್ಥವಾಗುತ್ತಿದೆ. ತುಂಬಾ ಕಷ್ಟದಲ್ಲಿರುವ ನಿರಾಶ್ರಿತರೆಲ್ಲರಿಗೂ ಬದುಕು ಕಟ್ಟಿಕೊಳ್ಳಲು ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರು ವಿವರಿಸಿದರು. ಕೊಡಗು ಜಿಲ್ಲೆಗೆ ಎರಡು ಮೂರು ದಿನದಲ್ಲಿ ಮತ್ತೆ ಆಗಮಿಸಿ ಒಂದು ದಿನ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕೊಡಗಿನ ಜನತೆಯ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

ಪ್ರಕೃತಿಯ ಅವಕೃಪೆಗೆ ತುತ್ತಾದವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಸರ್ಕಾರ ನಿಮ್ಮ ಜೊತೆಗಿದೆ. ನಿರಾಶ್ರಿತರು ನೊಂದುಕೊಳ್ಳಬೇಡಿ. ಧೈರ್ಯವಾಗಿರಿ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಈ ಸಂಧರ್ಭದಲ್ಲಿ ಮಕ್ಕಂದೂರು ಗ್ರಾಮದ ನಿರಾಶ್ರಿತರೊಬ್ಬರು ಜೀವನ ನಡೆಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಅವರಲ್ಲಿ ಕೋರಿದರು.

ಮುಕ್ಕೋಡ್ಲು, ಮಕ್ಕಂದೂರು, 2ನೇ ಮೊಣ್ಣಂಗೇರಿ, ಜೋಡುಪಾಲ ಮತ್ತಿತರ ಕಡೆಗಳಲ್ಲಿ ಭೂಕುಸಿತ ಉಂಟಾಗಿ ಸಾಕಷ್ಟು ನಷ್ಟ ಉಂಟಾಗಿದೆ. ನಿರಾಶ್ರಿತರಿಗೆ ಹೊಸ ಜೀವನ ಮಾಡಲು ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸುವಂತೆ ಅವರು ಮನವಿ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಹಾಗೂ ಸರ್ಕಾರದ ಕಾರ್ಯದರ್ಶಿಗಳಾದ ಸೆಲ್ವ ಕುಮಾರ್, ಗಂಗಾರಾಮ್ ಬಡೇರಿಯಾ, ಪೊಲೀಸ್ ಉನ್ನತ ಅಧಿಕಾರಿಗಳಾದ ಕಮಲ್ ಪಂಥ್, ಭಾಸ್ಕರ್ ರಾವ್ ಇತರರು ಇದ್ದರು.

CM Visit  03

#ನಾಳೆಯೂ ಕೊಡಗಿನಲ್ಲಿ ಮುಖ್ಯಮಂತ್ರಿ ಪ್ರವಾಸ : 

ಬೆಂಗಳೂರು, ಆಗಸ್ಟ್ 18- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ, ಆಗಸ್ಟ್ 19 ರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಪ್ರವಾಸ ರದ್ದು ಪಡಿಸಿದ್ದು, ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ರಸ್ತೆ ಮೂಲಕ ಮಡಿಕೇರಿಗೆ ತೆರಳಿದ ಮುಖ್ಯಮಂತ್ರಿಗಳು ಅಲ್ಲಿನ ಗಂಜಿಕೇಂದ್ರವೊಂದಕ್ಕೆ ತೆರಳಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.

ನಂತರ ಮಡಿಕೇರಿ ನಗರದಲ್ಲಿ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದರು.  ಮಡಿಕೇರಿ ಬಳಿ ಭೂಕುಸಿತದಿಂದ ಸಿಲುಕಿಕೊಂಡಿರುವ ಸುಮಾರು 60 ಜನರನ್ನು ರಕ್ಷಿಸಲು ಮುಖ್ಯಮಂತ್ರಿ ಗಳು ಪ್ರಯಾಣಿಸಿದ ಹೆಲಿಕಾಪ್ಟರ್ ಬಳಸುವ ಉದ್ದೇಶದಿಂದ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ಇಂದು ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿ, ನಾಳೆಯೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

CM Visit  01

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا