Urdu   /   English   /   Nawayathi

ಉಭಯ ರಾಷ್ಟ್ರಗಳ ಮಾತುಕತೆ ಕುರಿತು ಪ್ರಧಾನಿ ಮೋದಿಯಿಂದ ಯಾವುದೇ ಪ್ರಸ್ತಾಪಗಳು ಬಂದಿಲ್ಲ: ಪಾಕಿಸ್ತಾನ

share with us

ಇಸ್ಲಾಮಾಬಾದ್: 21 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಕಳೆದ ಶುಕ್ರವಾರವಷಅಟೇ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಇಮ್ರಾನ್ ಖಾನ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರೆದಿರುವ ಪತ್ರದಲ್ಲಿ ಉಭಯ ರಾಷ್ಟ್ರಗಳು ಮಾತುಕತೆ ನಡೆಸುವ ಕುರಿತು ಯಾವುದೇ ರೀತಿಯ ಪ್ರಸ್ತಾಪಗಳನ್ನೂ ಮಾಡಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಪಾಕಿಸ್ತಾನದ ನೂತನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರಿಗೆ ಪತ್ರ ಬರೆದಿದ್ದ ಪ್ರಧಾನಿ ಮೋದಿಯವರು ಅಭಿನಂದನೆ ಸಲ್ಲಿಸಿ, ಪಾಕಿಸ್ತಾನ ಜೊತೆಗೆ ಭಾರತ ರಚನಾತ್ಮಕ ಸಂಬಂಧ ಬಯಸುತ್ತದೆ. ಭಯೋತ್ಪಾದನಾ ಮುಕ್ತ ದಕ್ಷಿಣ ಏಷ್ಯಾ ನಿರ್ಮಾಣಕ್ಕೆ ಬದ್ಧವಾಗಿ ನಾವು ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದರು ಎಂದು ಹೇಳಲಾಗುತ್ತಿತ್ತು. 

ಈ ವರದಿಗಳ ಕುರಿತಂತೆ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮಾಹಿತಿ ನೀಡಿದ್ದು, ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸುವ ಕುರಿತು ಭಾರತ ಯಾವುದೇ ರೀತಿಯ ಪ್ರಸ್ತಾಪಗಳನ್ನೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನೂತನ ವಿದೇಶಾಂಗ ಸಚಿವ ಶಾಹ್ ಮಹಮ್ಮದ್ ಖುರೇಷಿ ಅವರು, ಭಾರತದ ಪ್ರಧಾನಮಂತ್ರಿಗಳು ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸುವ ಕುರಿತು ಪ್ರಸ್ತಾಪ ಮಾಡಿರುವುದಾಗಿ ಯಾವ ಹೇಳಿಕೆಗಳನ್ನೂ ನೀಡಿಲ್ಲ. ಆದರೆ, ಇಮ್ರಾನ್ ಖಾನ್ ಅವರಿಗೆ ಮೋದಿ ಪತ್ರ ಬರೆದಿದ್ದರು ಎಂದಷ್ಟೇ ಹೇಳಿದ್ದರು ಎಂದು ತಿಳಿಸಿದ್ದಾರೆ. 

ನೂತನ ವಿದೇಶಾಂಗ ಸಚಿವ ಶಾಹ್ ಮಹಮ್ಮದ್ ಖುರೇಷಿ ಅವರು, ಭಾರತದ ಪ್ರಧಾನಮಂತ್ರಿಗಳು ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸುವ ಕುರಿತು ಪ್ರಸ್ತಾಪ ಮಾಡಿರುವುದಾಗಿ ಯಾವ ಹೇಳಿಕೆಗಳನ್ನೂ ನೀಡಿಲ್ಲ. ಆದರೆ, ಇಮ್ರಾನ್ ಖಾನ್ ಅವರಿಗೆ ಮೋದಿ ಪತ್ರ ಬರೆದಿದ್ದರು ಎಂದಷ್ಟೇ ಹೇಳಿದ್ದರು ಎಂದು ತಿಳಿಸಿದ್ದಾರೆ. 

ಭಾರತಕ್ಕೆ ಆ.18 ರಂದು ಭೇಟಿ ನೀಡಿದ್ದ ಪಾಕಿಸ್ತಾದನ ಮಾಜಿ ಕಾನೂನು ಸಚಿವ ಅಲಿ ಜಾಫರ್ ಅವರು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಗೊಂದಿಗೆ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ನಡುವೆ ಸಕಾರಾತ್ಮಕ ಹಾಗೂ ರಚನಾತ್ಮಕ ವಾತಾವರಣ ಸೃಷ್ಟಿಸುವ ಕುರಿತಂತೆ ಮಾತುಕತೆ ನಡೆಸಿದ್ದರು.

ಉಭಯ ರಾಷ್ಟ್ರಗಳ ನಡುವೆ ಇರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಭಾರತದೊಂದಿಗೆ ಪರಸ್ಪರ ಪ್ರಯೋಜಕ ಹಾಗೂ ನಿರಂತರ ಮಾತುಕತೆ ನಡೆಸಲು ಪಾಕಿಸ್ತಾನ ಎದುರು ನೋಡುತ್ತಿದೆ. ಈ ನಡುವೆ ವಿವಾದಗಳು ಸೃಷ್ಟಿಯಾಗಿ, ಸಕಾರಾತ್ಮಕ ವಾತಾವರಣಗಳು ಹದಗೆಟ್ಟರೆ ಅವುಗಳಿಗೆ ಮಾಧ್ಯಮಗಳೇ ನೇರಹೊಣೆಯಾಗಿರುತ್ತವೆ ಎಂದಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا