Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 06 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದೊಳಗೆ ನುಗ್ಗಿ ಭಯೋತ್ಪಾದಕರನ್ನು ಹತ್ಯೆಗೈದು ಪರಾಕ್ರಮ ಮೆರೆದಿದ್ದ ಸೈನಿಕರ ಶೌರ್ಯ-ಸಾಹಸವನ್ನು ಶಾಶ್ವತವಾಗಿರಸಲು ಸೆ.28ರಂದು ಸರ್ಜಿಕಲ್ ಸ್ಟ್ರೈಕ್ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಸೆ.28ರಂದು ದೇಶಾದ್ಯಂತ ಪ್ರತಿಯೊಂದು ಲೋಕಸಭೆ, ವಿಧಾನಸಭೆ ಸೇರಿದಂತೆ ಎಲ್ಲೆಡೆ ಸರ್ಜಿಕಲ್ ಸ್ಟ್ರೈಕ್ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಿ ಸೈನಿಕರ ಶೌರ್ಯವನ್ನು ಸ್ಮರಿಸಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ.
ವಿಶೇಷವಾಗಿ ಬಿಜೆಪಿ ಆಡಳಿತವಿರುವ ಪ್ರತಿಯೊಂದು ರಾಜ್ಯಗಳಲ್ಲು ಇದನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿರುವ ಸೈನಿಕರು, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರನ್ನು ಸನ್ಮಾನಿಸುವ ಮೂಲಕ ಬಿಜೆಪಿ ದೇಶ ಕಾಯುವ ಸೈನಿಕರ ಪರವಾಗಿದೆ ಎಂಬುದನ್ನು ಜನತೆಗೆ ಮನವರಿಕೆ ಮಾಡಿಕೊಡಿ ಎಂದು ಕೇಂದ್ರ ಸೂಚನೆ ಕೊಟ್ಟಿದೆ.
ಈಗಾಗಲೇ ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, 16ರಿಂದ 28ರವರೆಗೆ ನಿರಂತರವಾಗಿ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಲೋಕಸಭೆ ಚುನಾವಣೆಗೆ ಮತದಾರರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ ಸೆ.16ರಂದು ಕಾವ್ಯಾಂಜಲಿ ದಿನ, 17ರಂದು ಆಯುಷ್ಮಾನ್ ಭಾರತ್ ದಿನಾಚರಣೆ ಹಾಗೂ ಸೆ.25ರಂದು ಬಿಜೆಪಿಯ ಸಂಸ್ಥಾಪಕರೊಲ್ಲಬ್ಬರಾದ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಪ್ರಯುಕ್ತ ಆಯುಷ್ಮಾನ್ ಭಾರತ್ ದಿನಾಚರಣೆಯನ್ನು ಆಚರಿಸಲು ಬಿಜೆಪಿ ತೀರ್ಮಾನಿಸಿದೆ.
ಕೇಂದ್ರ ಸರ್ಕಾರ ಸೆ.28ರಂದು 2ನೇ ವರ್ಷದ ಸರ್ಜಿಕಲ್ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಿದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳೇ ಈ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ನಿರ್ದೇಶನ ನೀಡಲಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ಚುನಾವಣೆಯ ಪ್ರಮುಖ ವಿಷಯಗಳಲ್ಲೊಂದಾಗಲಿದೆ. ಪಾಕಿಸ್ತಾನದ ಗಡಿಪ್ರದೇಶದಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ಸೈನಿಕರು ಸೀಮಿತ ದಾಳಿ ಮಾಡಿರುವುದು ಸಾಮಾನ್ಯ ಮಾತಲ್ಲ. ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕಾರ್ಗಿಲ್ ಮೇಲೆ ದಾಳಿ ನಡೆಸಿದ ಪಾಕ್ ಸೈನಿಕರ ವಿರುದ್ದ ಹಿಮ್ಮೆಟ್ಟಿಸಿ ಭಾರತ ವಿಜಯದ ಪತಾಕೆ ಹಾರಿಸಿತ್ತು. ಹೀಗಾಗಿ ಪ್ರತಿ ವರ್ಷ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದೇ ರೀತಿ ಸರ್ಜಿಕಲ್ ದಿನಾಚರಣೆಯನ್ನು ಮಾಡಲು ಕೇಂದ್ರ ಸರ್ಕಾರ ಆಲೋಚಿಸಿದೆ.
2016 ಸೆ.28ರಂದು ಭಾರತೀಯ ಸೇನಾಪಡೆ ಪಿಒಕೆಯಲ್ಲಿ ಭಾರತದ ಮೇಲೆ ದಾಳಿ ನಡೆಸಲು ಹೊಂಚು ಹಾಕಿದ್ದ ಪಾಕಿಸ್ತಾನ ಬೆಂಬಲಿತ ಅನೇಕ ಭಯೋತ್ಪಾದಕ ನೆಲೆಗಳ ಮೇಲೆ ಒಂದೇ ರಾತ್ರಿಯಲ್ಲಿ ದಾಳಿ ಮಾಡಿ ಧ್ವಂಸ ಮಾಡಿತ್ತು. ಈ ಮಿಂಚಿನ ಕಾರ್ಯಾಚರಣೆಯಲ್ಲಿ ಹಲವು ಉಗ್ರರು ಹತರಾಗಿದ್ದರು.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |