Urdu   /   English   /   Nawayathi

25 ಲಕ್ಷ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ: ಜೇಟ್ಲಿ

share with us

ನವದೆಹಲಿ: 15 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ದೇಶದಲ್ಲಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಕುಂದು-ಕೊರತೆಗಳನ್ನು ಇತ್ಯರ್ಥಗೊಳಿಸಲು ಬಹುತೇಕ ಶೇ.50ರಷ್ಟು ಗೌರವಧನ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಬಹುದಿನಗಳಿಂದ ನೆನೆಗುದಿಯಲ್ಲಿದ್ದವು. ಈಗ ಅವರಿಗೆ ಸೂಕ್ತ ಗೌರವ ಧನ ಹೆಚ್ಚಿಸುವ ಮೂಲಕ ಅವರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಜೇಟ್ಲಿ ಫೇಸ್‍ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ಬಹುತೇಕ ಶೇ.50ರಷ್ಟು ಹೆಚ್ಚಳ ಮಾಡಿರುವುದರಿಂದ ಸರ್ಕಾರದ ಬೊಕ್ಕಸದ ಮೇಲೆ ಭಾರೀ ಹೊರೆ ಬಿದ್ದಿದೆ. ಆದಾಗ್ಯೂ ಕಾರ್ಯಕರ್ತರ ಹಿತದೃಷ್ಟಿಯಿಂದ ಸರ್ಕಾರ ಅವರ ಗೌರವಧನವನ್ನು ಹೆಚ್ಚಿಸಿದೆ ಎಂದು ಜೇಟ್ಲಿ ಸಮರ್ಥಿಸಿಕೊಂಡರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا