Urdu   /   English   /   Nawayathi

ಪಕ್ಷದೊಳಗಿನ ಭಿನ್ನಮತ ಬಹಿರಂಗಗೊಳಿಸಿದರೆ ಶಿಸ್ತು ಕ್ರಮ : ರಾಹುಲ್ ಎಚ್ಚರಿಕೆ

share with us

ನವದೆಹಲಿ: 16 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಪಕ್ಷದೊಳಗಿನ ಭಿನ್ನಮತವನ್ನು ಮಾಧ್ಯಮದ ಮುಂದೆ ಬಹಿರಂಗಗೊಳಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.  ತೆಲಂಗಾಣ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಂದರ್ಭದಲ್ಲೇ ಪಕ್ಷದ ಕೆಲ ನಾಯಕರು ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿರುವ ಬಗ್ಗೆ ರಾಹುಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಎಐಸಿಸಿ ಉಸ್ತುವಾರಿ ಆರ್.ಸಿ ಕುಂಠಿಯಾ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ನಾಯಕರೊಂದಿಗೆ ನಿನ್ನೆ ರಾತ್ರಿ ನವದೆಹಲಿಯಲ್ಲಿ ಸಭೆ ನಡೆಸಿದ ಅವರು, ಪಕ್ಷದಲ್ಲಿನ ಆಂತರಿಕ ವಿಷಯಗಳು ಬಹಿರಂಗ ವಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು. ಮಾಧ್ಯಮಗಳಿಗೆ ನಕರಾತ್ಮಕ ಸುದ್ದಿಗಳನ್ನು ನೀಡಬೇಡಿ ಎಂದು ಎಚ್ಚರಿಕೆ ನೀಡಿರುವ ರಾಹುಲ್, ಪಕ್ಷದಲ್ಲಿ ಅಶಿಸ್ತು ಮತ್ತು ಬೇಜವಾಬ್ದಾರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಅಂಥವರ ವಿರುದ್ಧ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಭಿನ್ನಮತಗಳನ್ನು ಬದಿಗಿಟ್ಟು ಪಕ್ಷದ ಒಳಿತಿಗಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಅದನ್ನು ವರಿಷ್ಠರ ಗಮನಕ್ಕೆ ತರಬೇಕು. ಅದನ್ನು ಬಿಟ್ಟು ಮಾಧ್ಯಮಗಳಿಗೆ ನೆಗೆಟೀವ್ ಸುದ್ದಿ ಗಳನ್ನು ನೀಡುವುದು ಸರಿಯಲ್ಲ ಎಂದು ಸಲಹೆ ಮಾಡಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا