Urdu   /   English   /   Nawayathi

ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟತೆಯನ್ನು ಹೆಚ್ಚಿಸಿ: ಜಿ.ಟಿ.ದೇವೇಗೌಡಗೆ ಉಪ ಮುಖ್ಯಮಂತ್ರಿ ಪರಮೇಶ್ವರ್

share with us

ಬೆಂಗಳೂರು: 23 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ರಾಜ್ಯ ಸರ್ಕಾರದ ನೇತೃತ್ವದಲ್ಲಿ ಮುನ್ನಡೆಯಲಾಗುತ್ತಿರುವ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟತೆಯನ್ನು ಉತ್ತಮವಾಗಿಸುವಂತೆ ರಾಜ್ಯ ಹೆಚ್ಚುವರಿ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಶನಿವಾರ ಸೂಚಿಸಿದ್ದಾರೆ. ಈ ಕುರಿತಂತೆ ಜಿ.ಟಿ.ದೇವೇಗೌಡ ಅವರಿಗೆ ಪತ್ರ ಬರೆದಿರುವ ಪರಮೇಶ್ವರ್ ಅವರು, ಪತ್ರದಲ್ಲಿ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಹೇಳಿದ್ದು, ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ್ದಾರೆ. 

ಪತ್ರದಲ್ಲಿ ಪರಮೇಶ್ವರ್ ಅವರು, ಶಿಕ್ಷಣದ ಗುಣಮಟ್ಟ ಕುಸಿಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದು, ವಿಶ್ವವಿದ್ಯಾಲಯಗಳ ಆವರಣದಲ್ಲಿ ಭ್ರಷ್ಟಾಚಾರ ಹಾಗೂ ರಾಜಕೀಯ ನಡೆಯುತ್ತಿರುವುದನ್ನು ಪ್ರಸ್ತಾಪ ಮಾಡಿದ್ದಾರೆಂದು ಮೂಲಗಳು ತಿಳಿಸಿದ್ದಾರೆ. 

ಈ ಕುರಿತು ದೇವೇಗೌಡ ಅವರ ಬಳಿ ಪ್ರತಿಕ್ರಿಯೆ ಕೇಳಿದಾಗ, ನನಗೆ ಅಂತಹ ಯಾವುದೇ ಪತ್ರಗಳೂ ಬಂದಿಲ್ಲ. ಉಪ ಮುಖ್ಯಮಂತ್ರಿಗಳು ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆಂಬುದರ ಬಗ್ಗೆ ಮಾಹಿತಿ ಬಂದಿದೆ. ವಿಶ್ವವಿದ್ಯಾಲಯವೊಂದರಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿತ್ತು. ಈ ಕುರಿತು ಪರಿಶೀಲನೆ ನಡೆಸುತ್ತೇನೆ. ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ಹೇಳಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا