Urdu   /   English   /   Nawayathi

ಬೆಂಗಳೂರಿನಲ್ಲಿ ಭಾರೀ ಮಳೆ : ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ !

share with us

ಬೆಂಗಳೂರು: 25 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ  ಭಾರೀ ಮಳೆಯಾಗುತ್ತಿದೆ. ವಿಧಾನಸೌಧ, ಆಡುಗೋಡಿ, ಜೆಪಿ ನಗರ, ಶಾಂತಿ ನಗರ, ಮೆಜೆಸ್ಟಿಕ್ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗರು ತೀವ್ರ ತೊಂದರೆ ಎದುರಿಸುವಂತಾಗಿದೆ. ಭಾರೀ ಮಳೆಯಿಂದಾಗಿ  ಜೆಪಿನಗರದ ಡಾಲರ್ಸ್ ಕಾಲೋನಿ, ಬಿರೇಶ್ವರ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ನೀರನ್ನು ಹೊರಹಾಕಲು ನಿವಾಸಿಗಳು ಹರಸಾಹಸಪಡುವಂತಾಯಿತು .ಗಿರಿನಗರದ ಮೂರನೇ ಬ್ಲಾಕ್ ನಲ್ಲಿ ವಿದ್ಯುತ್ ಕಂಬವೊಂದು ಬಿದ್ದ ಪರಿಣಾಮ ಮರಕ್ಕೆ ವಿದ್ಯುತ್ ತಗುಲಿರುವ ಘಟನೆ ನಡೆದಿದೆ.

ಇನ್ನೂ ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಬಿಎಂಪಿ ಆಲರ್ಟ್ ಆಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ  ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا