Urdu   /   English   /   Nawayathi

ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗು

share with us

ವಾರ್ಧಾ(ಮಹಾರಾಷ್ಟ್ರ): 02 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ದೇಶದಲ್ಲಿ ಹೆಚ್ಚುತ್ತಿರುವ ಆತಂಕ ವಾತಾವರಣ, ದ್ವೇಷ ಮತ್ತು ಹಿಂಸಾಚಾರಗಳ ವಿರುದ್ಧ ಸಂಘಟಿತ ಹೋರಾಟ ನಡೆಸಲು ಇಂದು ನಡೆದ ಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ(ಸಿಡಬ್ಲ್ಯುಸಿ)ಯಲ್ಲಿ ಪಕ್ಷದ ನಾಯಕರು ಒಕ್ಕೊರಲಿನ ನಿರ್ಧಾರ ಕೈಗೊಂಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ಜಯಂತಿ ಅಂಗವಾಗಿ ಮಹಾರಾಷ್ಟ್ರದ ವಾರ್ಧಾದಲ್ಲಿ ಇಂದು ಮಹತ್ವದ ಸಿಡಬ್ಲ್ಯುಸಿ ಸಭೆ ನಡೆದಿದೆ.

ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂನಬಿ ಅಜಾದ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಪಕ್ಷದ ಧುರೀಣರು ಬಾಪೂಜಿ ಅವರು ದೇಶಕ್ಕೆ ನೀಡಿದ ಕೊಡುಗೆಗಳ ಗುಣಗಾನ ಮಾಡಿ ಅವರ ತತ್ತ್ವಾದರ್ಶಗಳನ್ನು ಅನುಸರಿಸುವಂತೆ ಕರೆ ನೀಡಿದ್ದರು.

ಇದೇ ವೇಳೆ, ದೇಶದಲ್ಲಿ ಹೆಚ್ಚುತ್ತಿರುವ ಆತಂಕ ವಾತಾವರಣ, ದ್ವೇಷ ಮತ್ತು ಹಿಂಸಾಚಾರಗಳ ವಿರುದ್ಧ ಧ್ವನಿ ಎತ್ತಿ ಹೋರಾಟ ಮುಂದುವರಿಸಲು ಪಕ್ಷದ ನಾಯಕರು ಒಕ್ಕೊರಲಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ಸೋನಿಯಾ, ರಾಹುಲ್ ಮತ್ತಿತರ ನಾಯಕರು ಬೆಳಗ್ಗೆ ದೆಹಲಿಯ ರಾಜ್‍ಘಾಟ್‍ಗೆ ತೆರಳಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಮ ನಮನ ಸಲ್ಲಿಸಿದರು.

ಬಳಿಕ ಅಲ್ಲಿಂದ ಮಹಾರಾಷ್ಟ್ರದ ವಾರ್ಧಾದ ಸೇವಾಗ್ರಾಮ್ ಆಶ್ರಮಕ್ಕೆ ಧಾವಿಸಿದ ರಾಹುಲ್ ಅಲ್ಲಿ ಪ್ರಾರ್ಥನೆ ಸಲ್ಲಿಸಿ ಶಾಂತಿಯಾತ್ರೆ ಕೈಗೊಂಡು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا