Urdu   /   English   /   Nawayathi

‘ದೇಶ್ ಕಾ ಪ್ರಧಾನಮಂತ್ರಿ ಚೋರ್ ಹೈ’ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವೀಡಿಯೋ …!

share with us

ನವದೆಹಲಿ: 08 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಟ್ಟುಕೊಂಡಿರುವ ಕಾಂಗ್ರೆಸ್, ಪ್ರಧಾನಮಂತ್ರಿ ಮೋದಿ ಕಳ್ಳ ಎಂಬ ಅಭಿಯಾನವನ್ನು ಆರಂಭಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋದಲ್ಲಿ ದೇಶದ ಪ್ರಧಾನಮಂತ್ರಿ ಕಳ್ಳ (ದೇಶ್ ಕಾ ಪ್ರಧಾನಮಂತ್ರಿ ಚೋರ್ ಹೈ) ಎಂಬ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ.

ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೆಲವರು ಪರ, ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಯುವ ಕಾರ್ಯಕರ್ತರು ಈ ವಿಡಿಯೋವನ್ನು ಸಿದ್ಧಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಪ್ರಧಾನಿ ಮೋದಿ ಕಳ್ಳ ಎಂಬ ಅಭಿಯಾನವನ್ನು ಆರಂಭಿಸುವಂತೆ ದೆಹಲಿ ಕಾಂಗ್ರೆಸ್ ನಾಯಕರು ಯುವ ಕಾರ್ಯಕರ್ತರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದೇಶಾದ್ಯಂತ ಈ ಅಭಿಯಾನ ಆರಂಭಿಸಿ ರಫೇಲ್ ಒಪ್ಪಂದದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿದೆ ಎಂಬುದನ್ನು ಮತದಾರರಿಗೆ ಮನವರಿಕೆ ಮಾಡಲು ಕಾಂಗ್ರೆಸ್ ಈ ತಂತ್ರ ಅನುಸರಿಸಿದೆ.ಸಶಸ್ತ್ರ ಪಡೆಗೆ ವಂಚನೆ ಮಾಡಿದ ಪ್ರಧಾನಿ ಮೋದಿ ಮತ್ತು ರಿಲೆಯನ್ಸ್ ಕಂಪನಿ ಮುಖ್ಯಸ್ಥ ಅನಿಲ್ ಅಂಬಾನಿಗೆ ನಾಚಿಕೆಯಾಗಬೇಕು. ಇಬ್ಬರು ಲೂಟಿಕೋರರು. ಎಚ್‍ಎಎಲ್ ಕಂಪನಿಗೆ ವಂಚನೆ ಮಾಡಿ ರಫೆಲ್ ಯುದ್ಧ ವಿಮಾನವನ್ನು ತಯಾರಿಸಲು ರಿಯಲೆನ್ಸ್ ಕಂಪನಿಗೆ ನೀಡಲಾಗಿದೆ. ಇದರಿಂದ ಲಕ್ಷಾಂತರ ಯುವಕರು ಉದ್ಯೋಗ ಕಳೆದುಕೊಳ್ಳುವಂತಾಗಿದೆ.

ಒಂದು ಕುಟುಂಬದ ಹಿತ ಕಾಪಾಡಲು ಮೋದಿ ಸಾವಿರಾರು ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ. ದೇಶಾದ್ಯಂತ ಈ ಅಭಿಯಾನವನ್ನು ನಡೆಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ. ಇನ್ನೊಂದೆಡೆ ಪ್ರದಾನಿಯನ್ನು ಚೋರ ಎಂದಿರುವ ಕಾಂಗ್ರೆಸ್ ಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಕಟುವಾಗಿ ಟೀಕಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا